ಸಿದ್ದರಾಮಯ್ಯ 
ರಾಜಕೀಯ

ಲಿಂಗಾಯತ ಸಿಎಂ ಈಗಾಗ್ಲೆ ಇದ್ದಾರಲ್ಲಾ, ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು: ಸಿದ್ದರಾಮಯ್ಯ ಎಡವಟ್ಟು

ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಜಕಾರಣಿಗಳು ಉತ್ಸಾಹಭರಿತ ಹೇಳಿಕೆ ನೀಡುವುದು ಸರ್ವೇ ಸಾಮಾನ್ಯ. ಅದೇ ಕೆಲವೊಮ್ಮೆ ಅವರಿಗೆ ಅರಿವಿಲ್ಲದಂತೆ ಎಡವಟ್ಟಾಗಿರುತ್ತದೆ.

ಮೈಸೂರು: ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಜಕಾರಣಿಗಳು ಉತ್ಸಾಹಭರಿತ ಹೇಳಿಕೆ ನೀಡುವುದು ಸರ್ವೇ ಸಾಮಾನ್ಯ. ಅದೇ ಕೆಲವೊಮ್ಮೆ ಅವರಿಗೆ ಅರಿವಿಲ್ಲದಂತೆ ಎಡವಟ್ಟಾಗಿರುತ್ತದೆ.
 
ಈಗ ಸಿದ್ದರಾಮಯ್ಯ ಅವರೂ ಅಂಥಹದ್ದೇ ಪರಿಸ್ಥಿತಿ ಎದುರಿಸುತ್ತಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಸಿದ್ದರಾಮಯ್ಯ ಅವರನ್ನು ಸುದ್ದಿವಾಹಿನಿಯೊಂದರ ಪತ್ರಕರ್ತರು ಸಂದರ್ಶನ ಮಾಡುತ್ತಿದ್ದಾಗ, ಬಿಜೆಪಿ ನಾಯಕರು ಅಧಿಕಾರಕ್ಕೆ ಬಂದಲ್ಲಿ ಲಿಂಗಾಯತ ಸಮುದಾಯದವರನ್ನು  ಮುಖ್ಯಮಂತ್ರಿ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಈ ಲಿಂಗಾಯತ ಸಿಎಂ ಅಸ್ತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು?: ಎಂದು ಪ್ರಶ್ನಿಸಿದ್ದಾರೆ.
 
ಇದಕ್ಕೆ ಪ್ರತಿಕ್ರಿಯೆ ನೀಡಿದ, ಈಗಾಗಲೇ ಲಿಂಗಾಯತರೇ ಮುಖ್ಯಮಂತ್ರಿಯಾಗಿದ್ದಾರಲ್ಲಾ, ಅವರೇ ಎಲ್ಲಾ ಭ್ರಷ್ಟಾಚಾರ ಮಾಡಿ ಹಾಳುಮಾಡಿರುವುದು ರಾಜ್ಯವನ್ನ ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಈ ಹೇಳಿಕೆ ಬೆನ್ನಲೇ ರಾಜ್ಯ ಬಿಜೆಪಿಯ ಸಾಮಾಜಿಕ ಜಾಲತಾಣ ಘಟಕ ಟ್ವೀಟ್ ಮಾಡಿದ್ದು, "ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ". ಎಂದು ಹೇಳಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT