ಇವಿಎಂ 
ರಾಜಕೀಯ

ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳು

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ನ್ಯಾಯಾಲಯದ ನಿಷೇಧದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ತಾವು ಸ್ಪರ್ಧಿಸುತ್ತಿರುವ ಕ್ಷೇತ್ರವಾದ ಧಾರವಾಡಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಡೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸಹ ಬಳ್ಳಾರಿ ಹೋಗಲು ಸಾಧ್ಯವಾಗದ ಕಾರಣ ಬಳ್ಳಾರಿ ನಗರದಲ್ಲಿ ತಮ್ಮ ಪತ್ನಿಯನ್ನು ಕಣಕ್ಕಿಳಿಸಿದ್ದಾರೆ.

ವಿನಯ್ ಕುಲಕರ್ಣಿ ಅವರ ಪರವಾಗಿ ಅವರ ಪತ್ನಿ ಶಿವಲೀಲಾ ನಾಮಪತ್ರ ಸಲ್ಲಿಸಿದ್ದಾರೆ. ವಿನಯ್ ಕುಲಕರ್ಣಿ ಅವರಿಗೆ ಮತದಾರರನ್ನು ತಲುಪಲು ವೀಡಿಯೋ ಮತ್ತು ದೂರವಾಣಿ ಕರೆಗಳೊಂದೇ ಮಾರ್ಗವಾಗಿದ್ದು, ಅವರು ವೀಡಿಯೋ ಸಂದೇಶದ ಮೂಲಕ ‘ನನ್ನ ಜೀವನ ನಿಮಗಾಗಿ ಹಾಗೂ ನನ್ನ ಕ್ಷೇತ್ರದ ಜನರಿಗಾಗಿ ಮುಡಿಪಾಗಿ ಇಡುತ್ತೇನೆ. ಇಂದು ನನ್ನನ್ನು ಬೆಂಬಲಿಸಿದ ನೀವೇ ನನ್ನ ಶಕ್ತಿ ಎಂದು ಹೇಳಿದ್ದಾರೆ.

ಇನ್ನು ವಿನಯ್ ಕುಲಕರ್ಣಿಗೆ ಹೋಲಿಸಿದರೆ 'ಬಳ್ಳಾರಿಯ ರೆಡ್ಡಿ ಸಹೋದರರು' ಖ್ಯಾತಿಯ ಮಾಜಿ ಸಚಿವ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಪ್ರಕರಣವು ಹೆಚ್ಚು ಭಿನ್ನವಾಗಿಲ್ಲ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಚಿವ, ರೆಡ್ಡಿ ಅವರು ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಅನಂತಪುರ ಮತ್ತು ವೈಎಸ್‌ಆರ್ ಕಡಪ ಜಿಲ್ಲೆಗಳಿಗೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿದೆ.

ರೆಡ್ಡಿ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ.

ಅವರ ಸಹೋದರರಾದ ಜಿ ಕರುಣಾಕರ ರೆಡ್ಡಿ ಮತ್ತು ಜಿ ಸೋಮಶೇಖರ ರೆಡ್ಡಿ ಅವರು ಬಿಜೆಪಿಯಲ್ಲಿದ್ದು, ಬಳ್ಳಾರಿ ನಗರ ಮತ್ತು ಹರಪನಹಳ್ಳಿಯಿಂದ ಕೇಸರಿ ಪಕ್ಷದಿಂದಲೇ ಸ್ಪರ್ಧಿಸಿದ್ದಾರೆ.

ಬಳ್ಳಾರಿ ಪ್ರವೇಶಿಸಲು ಅವಕಾಶವಿಲ್ಲದ ಕಾರಣ, ರೆಡ್ಡಿ ಅವರು ಕೊಪ್ಪಳ ಜಿಲ್ಲೆಯ ಪಕ್ಕದ ಗಂಗಾವತಿಯಿಂದ ಸ್ಪರ್ಧಿಸಿದ್ದು, ಅವರ ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಬಳ್ಳಾರಿ ನಗರ ಕ್ಷೇತ್ರದಿಂದ ತಮ್ಮ ಪತ್ನಿ ಲಕ್ಷ್ಮಿ ಅರುಣಾ ಜಿ ಅವರನ್ನು ಕಣಕ್ಕಿಳಿಸಿದ್ದಾರೆ.

ನಾಮಪತ್ರ ಸಲ್ಲಿಸುವ ದಿನ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು, ತಮ್ಮ ಜೊತೆಯಲ್ಲಿ ಪತಿ ಬರಲಾಗದ ಪರಿಸ್ಥಿತಿಯನ್ನು ನೆನೆದು ಕಣ್ಣೀರಿಟ್ಟರು. ಆದರೆ "ಮಧ್ಯದಲ್ಲಿ ಸ್ಥಗಿತಗೊಂಡ" ರಿಂಗ್ ರಸ್ತೆ, ವಿಮಾನ ನಿಲ್ದಾಣ, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕುಡಿಯುವ ನೀರಿನಂತಹ ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ಮತದಾರರು ತನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT