ಬಸವರಾಜ ಬೊಮ್ಮಾಯಿ - ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಬಿಜೆಪಿಗೆ ಸಂಕಟ ತಂದಿಟ್ಟ ರೆಬೆಲ್ ನಾಯಕರು; ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪರಿಂದ ಬಂಡಾಯ ಶಮನ ಸಾಧ್ಯವೇ?

ಪಕ್ಷವು ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಹಲವು ಕ್ಷೇತ್ರಗಳಲ್ಲಿ ಬಂಡಾಯ ಶಮನಗೊಳಿಸಲು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿದೆ ಎನ್ನಲಾಗಿದೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಚಿವರಾದ ವಿ ಸೋಮಣ್ಣ, ನಾರಾಯಣ ಗೌಡ ಸೇರಿದಂತೆ ಇತರರನ್ನು ಕೇಸರಿ ಪಾಳಯದಲ್ಲಿಯೇ ಇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ ಬಿಜೆಪಿಯ ಹೈಕಮಾಂಡ್ ರಾಜ್ಯ ನಾಯಕರಿಂದಲೂ ಅದನ್ನೇ ನಿರೀಕ್ಷಿಸುತ್ತಿದೆ. ಪಕ್ಷವು ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಹಲವು ಕ್ಷೇತ್ರಗಳಲ್ಲಿ ಬಂಡಾಯ ಶಮನಗೊಳಿಸಲು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಕೇಳಿದೆ ಎನ್ನಲಾಗಿದೆ.

ತುಮಕೂರಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಹಾಲಿ ಶಾಸಕ ಹಾಗೂ ಪಕ್ಷದ ಅಭ್ಯರ್ಥಿ ಜಿ.ಬಿ. ಜ್ಯೋತಿ ಗಣೇಶ್ ಅವರ ನಿರೀಕ್ಷೆಗೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಅದೇ ರೀತಿ ಪುತ್ತೂರಿನಲ್ಲಿ ಅಧಿಕೃತ ಅಭ್ಯರ್ಥಿ ಆಶಾ ತಿಮ್ಮಪ್ಪ ವಿರುದ್ಧ ಅರುಣ್ ಕುಮಾರ್ ಪುತ್ತಿಲ, ಚನ್ನಗಿರಿಯಲ್ಲಿ ಎಚ್.ಎಸ್. ಶಿವಕುಮಾರ್ ವಿರುದ್ಧ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಹಾಗೂ ಕುಂದಗೋಳದಲ್ಲಿ ಎಂ.ಆರ್.ಪಾಟೀಲ್ ವಿರುದ್ಧ ಚಿಕ್ಕನಗೌಡರ್ ಕಣಕ್ಕಿಳಿಯಲಿದ್ದಾರೆ.

ತುಮಕೂರು ಲೋಕಸಭಾ ಸದಸ್ಯ ಜಿ.ಎಸ್. ಬಸವರಾಜ್ ಮತ್ತು ಕಾನೂನು ಸಚಿವ ಜೆ.ಸಿ.ಮಾಧು ಸ್ವಾಮಿ ನಡುವಿನ ಶೀತಲ ಸಮರವೂ ಪಕ್ಷಕ್ಕೆ ದೊಡ್ಡ ಸಂಕಟವನ್ನುಂಟು ಮಾಡುವ ಸಾಧ್ಯತೆ ಇದೆ. ‘ಸ್ಪರ್ಧೆಯಲ್ಲಿ ಮಾಧುಸ್ವಾಮಿ ನನ್ನ ನೇರ ಎದುರಾಳಿಯಲ್ಲ, ಜೆಡಿಎಸ್‌ನ ಬಿ ಸುರೇಶ್‌ಬಾಬು ನನ್ನ ಎದುರಾಳಿ’ ಎಂದು ಬಸವರಾಜ್‌ ಬೆಂಬಲಿಗ ಕಿರಣ್‌ಕುಮಾರ್‌ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್