ವಿಜಯಪುರ: ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯುವುದಿಲ್ಲ. ಯಾಕಂದ್ರೆ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲುತ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.
ಇಂದು ವಿಜಯಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ನಂತರ ಕನಕದಾಸ ವೃತ್ತದಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ಬಿಜೆಪಿಯವರು ನನ್ನ ಸರ್ಕಾರಿ ನಿವಾಸವನ್ನು ಕಸಿದುಕೊಂಡರು. ನೂರಾರು ಜನರು ತಮ್ಮ ಮನೆ ತಗೊಳ್ಳಿ ಎಂದು ಹೇಳಿದರು. ನನ್ನ ಮನೆ ಕಸಿದುಕೊಂಡಿದ್ದು ಒಳ್ಳೆಯದೇ ಆಗಿದೆ ಎಂದರು.
ಇದನ್ನು ಓದಿ: ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮಾಡಲು ಅವಕಾಶ ಇರುವುದಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದರು.
ವಿಜಯಪುರದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಹೂವಿನ ಹಾರ ಹಾಕುವ ಮೂಲಕ ಕಾಂಗ್ರೆಸ್‌ನ ಬೃಹತ್ ರೋಡ್‌ಶೋಗೆ ಚಾಲನೆ ನೀಡಿದ ರಾಹುಲ್ ಗಾಂಧಿ, ನಗರದ ಶಿವಾಜಿ ವೃತ್ತದಿಂದ ಕನಕದಾಸ ವೃತ್ತದವರೆಗೂ ಬೃಹತ್ ರೋಡ್ ಶೋ ನಡೆಸಿದರು.