ಸಾಂದರ್ಭಿಕ ಚಿತ್ರ 
ರಾಜಕೀಯ

ಪುಲಿಕೇಶಿನಗರ ಕ್ಷೇತ್ರ: ಏಕೈಕ ಎಐಎಡಿಎಂಕೆ ಅಭ್ಯರ್ಥಿ ನಾಮಪತ್ರ ವಾಪಸ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ.

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಪುಲಿಕೇಶಿನಗರದಿಂದ ಏಕೈಕ ಎಐಎಡಿಎಂಕೆ ಅಭ್ಯರ್ಥಿಯಾಗಿ  ಡಿ ಅನ್ಬರಸನ್ ನಾಮಪತ್ರ ಸಲ್ಲಿಸಿದ್ದರು. ಆದರೆ, ಬಿಜೆಪಿಯ ಮನವಿ ಮೇರೆಗೆ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಪಕ್ಷ ಹೇಳಿದೆ.

ದೆಹಲಿಯ ಹಿರಿಯ ಬಿಜೆಪಿ ನಾಯಕರು ಪಳನಿಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಡಿ ಅನ್ಬರಸನ್ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿರುವುದಾಗಿ ಎಐಎಡಿಎಂಕೆ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ. 

ಬಿಜೆಪಿ ಮನವಿಗೆ ಮಣಿದ ಅನ್ಬರಸನ್ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮಿತ್ರ ಪಕ್ಷಗಳಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!