ರಾಜಕೀಯ

ಹಳೇ ಪ್ಲೇಯರ್ ರಿಟೈರ್ಡ್ ಆಗಿ ಅಂದ್ರೆ ಬೇರೆ ಟೀಮ್‌ಗೆ ಹೋದ್ರು; ಶೆಟ್ಟರ್‌ ಬದಲಾಯಿಸಲು ತೀರ್ಮಾನಿಸಿದ್ದೇ ಮೋದಿ, ಅಮಿತ್‌ ಶಾ: ಜೋಶಿ

Shilpa D

​ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌ ಅವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನಿಸಿದರುಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಟಿಕೆಟ್‌ ತಪ್ಪಿಸಿರುವ ವಿಷಯ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ಗಮನಕ್ಕಿಲ್ಲ ಎಂದು ಪಕ್ಷ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ ಶೆಟ್ಟರ್‌ ಅವರ ಹೇಳಿಕೆಗ ಪ್ರತಿಕ್ರಿಯಿಸಿದ್ದಾರೆ.

ಅಮಿತ್‌ ಶಾ ಅವರು ಶೆಟ್ಟರ್‌ ಅವರಿಗೆ ದೂರವಾಣಿ ಕರೆ ಮಾಡಿ, ರಾಜ್ಯಸಭಾ ಸದಸ್ಯ ಸ್ಥಾನ ಅಥವಾ ನೀವು ಕೇಳುವ ಬೇರೆ ಯಾವುದಾದರೂ ಸ್ಥಾನ ನೀಡುತ್ತೇವೆ. ಚುನಾವಣೆಗೆ ಸ್ಪರ್ಧಿಸಲು ಹೊಸಬರಿಗೆ ಅವಕಾಶ ಮಾಡಿಕೊಡಿ. ನೀವು ಹೇಳುವ ಕಾರ್ಯಕರ್ತನಿಗೆ ಟಿಕೆಟ್‌ ನೀಡುತ್ತೇವೆ ಎಂದೂ ಹೇಳಿದ್ದರು ಎಂದು ವಿವರಿಸಿದರು.

ಜಗದೀಶ್‌ ಶೆಟ್ಟರ್‌ ಹೋಗಿರುವುದರಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಹಳೆ ಪ್ಲೇಯರ್ ರಿಟೈರ್ಡ್ ಆಗಿ ಅಂದಿದ್ದೇವು. ಆದರೆ ಅವರು ಮತ್ತೊಂದು ಟೀಮ್ ನಲ್ಲಿ ಆಡೋಕೆ ಹೋಗಿದ್ದಾರೆ. ಆದರೂ ಈ ಸಲ ಕಪ್ ನಮ್ದೇ ಎಂದು ಜಗದೀಶ್‌ ಶೆಟ್ಟರ್ ವಿರುದ್ಧ ವ್ಯಂಗ್ಯವಾಡಿದರು.

SCROLL FOR NEXT