ರಾಜಕೀಯ

ಹಿಜಾಬ್ ವಿವಾದದಿಂದ ವಿಧಾನಸಭೆ ಚುನಾವಣೆಯಲ್ಲಿ ಎಸ್ ಡಿಪಿಐಗಿಂತ 'ಕೈ'ಗೆ ಲಾಭ ಹೆಚ್ಚು!

ಒಂದು ವರ್ಷ ಹಿಂದೆ ಕರ್ನಾಟಕದ ಕರಾವಳಿ ಭಾಗದಲ್ಲಿ ಆರಂಭವಾಗಿ ನಂತರ ರಾಜ್ಯವ್ಯಾಪಿ ವಿಸ್ತರಿಸಿ ದೇಶ ಮಟ್ಟದಲ್ಲಿ ಸುದ್ದಿ ಮಾಡಿದ್ದ ಹಿಜಾಬ್ ವಿವಾದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಗೆ ಲಾಭವಾಗುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮಂಗಳೂರು: ಒಂದು ವರ್ಷ ಹಿಂದೆ ಕರ್ನಾಟಕದ ಕರಾವಳಿ ಭಾಗದಲ್ಲಿ ಆರಂಭವಾಗಿ ನಂತರ ರಾಜ್ಯವ್ಯಾಪಿ ವಿಸ್ತರಿಸಿ ದೇಶ ಮಟ್ಟದಲ್ಲಿ ಸುದ್ದಿ ಮಾಡಿದ್ದ ಹಿಜಾಬ್ ವಿವಾದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಗೆ ಲಾಭವಾಗುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ಹಿಜಾಬ್ ನಿಷೇಧದ ವಿರುದ್ಧ ಎಸ್ ಡಿಪಿಐ ತೀವ್ರವಾಗಿ ಪ್ರಚಾರ ಆರಂಭಿಸಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮ್ ಯುವಜನತೆಯನ್ನು ವಿಶೇಷವಾಗಿ ಗಮನ ಸೆಳೆದಿತ್ತು. ಕರಾವಳಿ ಭಾಗದಲ್ಲಿ ಮುಸ್ಲಿಂ ಜನಸಂಖ್ಯೆಯ ಶೇಕಡಾ 20ರಷ್ಟು ಮಂದಿ ಮುಸ್ಲಿಂ ಸಮುದಾಯದವರಾಗಿದ್ದಾರೆ. ಹಿಜಾಬ್ ನಿಷೇಧ ವಿಚಾರದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಸಿಕ್ಕಿರುವ ಅಭೂತಪೂರ್ವ ಬೆಂಬಲ, ಪ್ರತಿಕ್ರಿಯೆ ಕಂಡು ಎಸ್ ಡಿಪಿಐ ತನ್ನ ಅಭ್ಯರ್ಥಿಗಳನ್ನು ಈ ಭಾಗದಲ್ಲಿ ಕಣಕ್ಕಿಳಿಸಿದೆ. ಅವಿಭಜಿತ ದಕ್ಷಿಣ ಕನ್ನಡದಲ್ಲಿ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡಬಿದರೆ, ಬೆಳ್ತಂಗಡಿ ಮತ್ತು ಕಾಪುವಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಬಿಜೆಪಿ ಸರ್ಕಾರವು ಮುಸ್ಲಿಮರಿಗೆ ಶೇಕಡಾ 4 ರಷ್ಟು ಒಳ-ಮೀಸಲಾತಿಯನ್ನು ರದ್ದುಗೊಳಿಸಿರುವುದರಿಂದ ಸಮುದಾಯವು ಕೇಸರಿ ಪಕ್ಷದ ಬಗ್ಗೆ ಹೆಚ್ಚು ಅಸಮಾಧಾನಗೊಂಡಿದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪಕ್ಷ ನೋಡುತ್ತಿದೆ. 

ಮುಸ್ಲಿಮರು ಹೆಚ್ಚಿರುವ ಮಂಗಳೂರು ಮತ್ತು ಬಂಟ್ವಾಳ ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ವಲ್ಪ ಮತಗಳನ್ನು ಗಳಿಸಬಹುದು, ಆದರೆ ಕಾಂಗ್ರೆಸ್‌ನ ಭವಿಷ್ಯವನ್ನು ಹಾಳುಮಾಡಲು ಸಾಧ್ಯವಿಲ್ಲ ಎಂದು ರಾಜಕೀಯ ವಿಶ್ಲೇಷಕ ಪ್ರೊ.ಮುಜಾಫರ್ ಅಸ್ಸಾದಿ ಅಭಿಪ್ರಾಯಪಟ್ಟಿದ್ದಾರೆ.

ಹಿಜಾಬ್ ವಿವಾದ ಬಳಸಿ, ಎಸ್‌ಡಿಪಿಐ ಕರಾವಳಿ ಭಾಗದಲ್ಲಿ ಮುಸ್ಲಿಮ್ ಮತದಾರರನ್ನು ಓಲೈಸಲು ನೋಡಿದ್ದು ವಾಸ್ತವ ಸಂಗತಿ. ಮುಸ್ಲಿಮ್ ಸಮುದಾಯದಲ್ಲಿ ಭದ್ರತೆಯ ಭಾವನೆಯನ್ನು ಪ್ರಚೋದಿಸಲು ಪ್ರಯತ್ನಿಸಿತು, ಆದರೆ ಸರ್ಕಾರದ ಒಳ ಮೀಸಲಾತಿ ನಿರ್ಧಾರದ ನಂತರ ಸಮುದಾಯವು ಅಸಮಾಧಾನಗೊಂಡಿದ್ದು ಇದು ಎಸ್ ಡಿಪಿಐಗೆ ಹೊಡೆತ ಬಿದ್ದಿದೆ. ಕರಾವಳಿಯಲ್ಲಿ ಎಸ್‌ಡಿಪಿಐಗಿಂತ ಹೆಚ್ಚಾಗಿ ಕಾಂಗ್ರೆಸ್ ನ್ನು ಬೆಂಬಲಿಸುತ್ತಿವೆ. 

ಹಿಜಾಬ್ ವಿವಾದದ ಸಂದರ್ಭದಲ್ಲಿ ಸಿಎಫ್‌ಐ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಂಟ್ವಾಳದ ಯುವ ಮತದಾರ ಅಲ್ತಾಫ್ (ಹೆಸರು ಬದಲಾಯಿಸಲಾಗಿದೆ) ಜಾತ್ಯತೀತ ಮತಗಳನ್ನು ವಿಭಜಿಸದಿದ್ದರೆ ಸಮುದಾಯಕ್ಕೆ ಲಾಭವಾಗುತ್ತದೆ ಎಂದು ಭಾವಿಸುತ್ತಾರೆ. "2B ಮೀಸಲಾತಿಯನ್ನು ಮತ್ತೆ ತರಬೇಕೆಂದು ನಾವು ಬಯಸುತ್ತೇವೆ. ಈ ಬಗ್ಗೆ ಚುನಾವಣೆಯಲ್ಲಿ ಭರವಸೆ ನೀಡುವ ಪಕ್ಷಕ್ಕೆ ಮತ ಹಾಕುತ್ತೇವೆ ಎನ್ನುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT