ರಾಜಕೀಯ

ಎಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್; ಮತ್ತೆ ಭರ್ಜರಿ ಚುನಾವಣಾ ಕ್ಯಾಂಪೇನ್

Shilpa D

ಬೆಂಗಳೂರು: ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಜೆಡಿಎಸ್ ಮುಖಂಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಹವಣಿಸುತ್ತಿದ್ದಾರೆ.

ಮೈಸೂರಿನಲ್ಲಿ ವರುಣಾ ಮತ್ತು ಚಾಮರಾಜ ಕ್ಷೇತ್ರಗಳಿಗೆ ಭೇಟಿ ನೀಡಲಿರುವ ಅವರು,  ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ತಮ್ಮ ಅಭ್ಯರ್ಥಿ ಜಿ.ಟಿ.ದೇವೇಗೌಡರು ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಎಚ್‌ಡಿ ಕುಮಾರಸ್ವಾಮಿ ಅವರನ್ನು ಡಿಸ್ಚಾರ್ಜ್ ಮಾಡುವಂತೆ ಮನವಿ ಮಾಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ತನ್ಮಧ್ಯೆ, ಎಚ್‌ಡಿ ಕುಮಾರಸ್ವಾಮಿ ಅವರು ಪಕ್ಷದ ವಾರ್ ರೂಮ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರು ಮಣಿಪಾಲದ ಆಸ್ಪತ್ರೆಯ ಹಾಸಿಗೆಯಿಂದಲೂ ವಾರ್ ರೂಮ್‌ನಲ್ಲಿರುವ ತಂತ್ರಜ್ಞರು ಮತ್ತು ಯೋಜಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅಲ್ಲಿ ಅವರು ದಿನಕ್ಕೆ  ನಿಗದಿತ ಸಂಖ್ಯೆಯ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಭೆ ನಡೆಸಬೇಕೆಂದು ಸೂಚಿಸಿದ್ದಾರೆ. ಕುಮಾರಸ್ವಾಮಿ ಅವರೇ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರುವಂತೆ ರಾಜ್ಯಾದ್ಯಂತ ಅಭ್ಯರ್ಥಿಗಳಿಂದ ಬೇಡಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು ಮೈಸೂರು ಜಿಲ್ಲೆಗೆ ಆಗಮಿಸುವ ನಿರೀಕ್ಷೆಯಿದ್ದು, ರೋಡ್ ಶೋ, ರ್ಯಾಲಿ, ಸಭೆ, ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ.

SCROLL FOR NEXT