ಸಾಂದರ್ಭಿಕ ಚಿತ್ರ 
ರಾಜಕೀಯ

ಕರಾವಳಿ ಜಿಲ್ಲೆಗಳಲ್ಲಿ 'ಹಿಜಾಬ್' ವಿಷಯ ಚುನಾವಣಾ ಪ್ರಚಾರದಲ್ಲಿ ಪ್ರಮುಖ ಅಂಶ ಅಲ್ಲವೇ ಅಲ್ಲ!

ಕಳೆದ ವರ್ಷ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ 'ಹಿಜಾಬ್ ನಿಷೇಧ' ರಾಷ್ಟ್ರಮಟ್ಟದಲ್ಲಿ ದೊಡ್ಡ ವಿಷಯವಾಗಿತ್ತು. ಆದರೆ, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಾದಾತ್ಮಕ ಹಿಜಾಬ್ ವಿಚಾರ ಪ್ರಮುಖ ವಿಷಯವಾಗಿ ಕಾಣುತ್ತಿಲ್ಲ. 

ಮಂಗಳೂರು: ಕಳೆದ ವರ್ಷ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ 'ಹಿಜಾಬ್ ನಿಷೇಧ' ರಾಷ್ಟ್ರಮಟ್ಟದಲ್ಲಿ ದೊಡ್ಡ ವಿಷಯವಾಗಿತ್ತು. ಆದರೆ, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಾದಾತ್ಮಕ ಹಿಜಾಬ್ ವಿಚಾರ ಪ್ರಮುಖ ವಿಷಯವಾಗಿ ಕಾಣುತ್ತಿಲ್ಲ. 

ಈ ವಿವಾದ ಭುಗಿಲೆದ್ದ ನಂತರ ‘ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಉಡುಪು ಧರಿಸಲು ಅವಕಾಶ ನೀಡುವುದಿಲ್ಲ’ ಎಂದು ಹೇಳಿ, ರಾಜ್ಯದ ಬಿಜೆಪಿ ಸರ್ಕಾರ ಕಳೆದ ವರ್ಷ ಕ್ಯಾಂಪಸ್‌ಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು.

ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ಸಮವಸ್ತ್ರಗಳನ್ನು ಮಾತ್ರ ಧರಿಸುವಂತೆ ಸೂಚಿಸಲಾಗಿದೆ. ಈ ನಡೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ನ್ಯಾಯಾಲಯದ ಮೊರೆ ಹೋದ ನಂತರ ಕರ್ನಾಟಕ ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ನಂತರ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಅಕ್ಟೋಬರ್‌ನಲ್ಲಿ ವಿಭಜಿತ ತೀರ್ಪು ನೀಡಿತು.  ನಂತರ ಈ ವಿಷಯವನ್ನು ಅತ್ಯುನ್ನತ ಪೀಠವು ವಿಚಾರಣೆ ನಡೆಸುತ್ತಿದೆ.

ಹಿಜಾಬ್ ವಿವಾದ ಬಿಜೆಪಿ ಫೋಸ್ಟರ್  ಬಾಯ್ ಆಗಿದ್ದ ಯಶಪಾಲ್ ಸುವರ್ಣ ಈಗ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಗಲಾಟೆ ನಡೆದಾಗ ಅವರು ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಸಮಿತಿಯ ಅಧ್ಯಕ್ಷರಾಗಿದ್ದ ಹಾಲಿ ಶಾಸಕ ರಘುಪತಿ ಭಟ್ ಅವರ ಸ್ಥಾನಕ್ಕೆ ಮೊಗವೀರ ಮುಖಂಡ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಬಲವಾದ ಬೆಂಬಲ ಹೊಂದಿರುವ ಫೈರ್‌ಬ್ರಾಂಡ್ ಕಾರ್ಯಕರ್ತ ಸುವರ್ಣ ಅವರನ್ನು ನೇಮಿಸಲಾಗಿದೆ. 

ದಕ್ಷಿಣ ಕನ್ನಡ ಭಾಗದಲ್ಲಿ ಹಿಜಾಬ್ ವಿಚಾರವಾಗಿ ಅಶಾಂತಿ ಸೃಷ್ಟಿಸಲು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ಕಾರಣವಾಗಿದೆ. ಉಳಿದಂತೆ ಉಡುಪಿ ಶಾಂತಿಪ್ರಿಯರ ತಾಣ ಎಂದು ಅವರು ಹೇಳಿದರು. ಸರ್ಕಾರಿ ಪಿಯು ಕಾಲೇಜಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬಡ ವಿದ್ಯಾರ್ಥಿಗಳ ಗಮನವನ್ನು ಬೇರೆಡೆಗೆ ಸೆಳೆಯಲು ಪಿಎಫ್ ಐ ಬಯಸಿದೆ.  ಆದರೆ, ಚುನಾವಣಾ ಪ್ರಚಾರದಲ್ಲಿ ಹಿಜಾಬ್ ವಿಷಯವನ್ನು ಸಕ್ರಿಯವಾಗಿ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಅಭಿವೃದ್ಧಿ ಯೋಜನೆಯತ್ತ ಗಮನ ಹರಿಸುತ್ತಿದೆ ಎಂದು ಅವರು ತಿಳಿಸಿದರು. 

ಹಿಜಾಬ್ ವಿವಾದ ಉಂಟಾದಾಗ ಬಿಜೆಪಿಯವರು ದ್ವಂದ್ವ ನಿಲುವು ತಳೆದಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್, ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಪ್ರತಿಯೊಬ್ಬರೂ ದೇಶದ ನಿಯಮ ಮತ್ತು ಕಾನೂನನ್ನು ಅನುಸರಿಸಬೇಕು ಎನ್ನುತ್ತಾರೆ. ಜಿಲ್ಲೆಯ ಕಾಪು ಮತ್ತು ದಕ್ಷಿಣ ಕನ್ನಡದಲ್ಲಿಎಸ್ ಪಿಡಿಪಿಐನ ನಾಲ್ವರು ಅಭ್ಯರ್ಥಿಗಳಿದ್ದರೆ, ಹಿಜಾಬ್ ಸಮಸ್ಯೆ ಹುಟ್ಟಿಕೊಂಡ ಉಡುಪಿ ಕ್ಷೇತ್ರದಲ್ಲಿ ಆ ಪಕ್ಷದ ಅಭ್ಯರ್ಥಿಗಳು ಇಲ್ಲ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವಿಶೇಷವಾಗಿ ಪುತ್ತೂರು ಮತ್ತು ಮಂಗಳೂರು ಕ್ಷೇತ್ರಗಳಲ್ಲಿಅವರ ಉಗ್ರ ಕೋಮುವಾದಿ ಪ್ರಚಾರದ ಬಗ್ಗೆ ಕಾಂಗ್ರೆಸ್ ಜಾಗರೂಕವಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶಾಫಿ ಬಳ್ಳಾರಿಯನ್ನು ಪಕ್ಷ ಕಣಕ್ಕಿಳಿಸಿದೆ.

ಆದರೆ, ಮಂಗಳೂರಿನ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ ತಮ್ಮ ಕ್ಷೇತ್ರದಲ್ಲಿ ಎಸ್‌ಡಿಪಿಐ ಸ್ಪರ್ಧೆ  ಬಗ್ಗೆ ಚಿಂತಿಸುವುದಿಲ್ಲ ಎಂದು ಹೇಳಿದ್ದಾರೆ. ಇಲ್ಲಿನ ಮತದಾರರಿಗೆ ನನ್ನ ಹಾಗೂ ನನ್ನ ಕೆಲಸ ಗೊತ್ತಿದೆ ಎಂದರು. ಪಕ್ಷದ ಪ್ರಭಾವ ಇರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT