ಪ್ರಧಾನಿ ನರೇಂದ್ರ ಮೋದಿ 
ರಾಜಕೀಯ

ಏಪ್ರಿಲ್ 27 ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಮೋದಿ ಸಂವಾದ: ಶೋಭಾ ಕರಂದ್ಲಾಜೆ

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳು  27ರಂದು ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳು  27ರಂದು ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದ ಹಮ್ಮಿಕೊಳ್ಳಲಾಗಿದೆ. ಬೂತ್‍ಗಳಲ್ಲಿ ಟಿ.ವಿಗಳನ್ನು, ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಅಳವಡಿಸಲಾಗುವುದು. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿ ಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದಾರೆ ಎಂದರು.

ಬೂತ್ ಮಟ್ಟದಲ್ಲಿ 58 ಸಾವಿರ ಸ್ಥಳಗಳಲ್ಲಿ ಈ ಆ್ಯಪ್ ಗಳ ಮೂಲಕ ಕಾರ್ಯಕರ್ತರು ಸಂವಾದವನ್ನು ವೀಕ್ಷಿಸಲಿದ್ದಾರೆ. ಎಲ್‍ಇಡಿ ಸ್ಕ್ರೀನ್ ಇರುವ ಕಡೆ ಸುಮಾರು 1,000 ಕಾರ್ಯಕರ್ತರನ್ನು, ಬೂತ್‍ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5,000 ನಮೋಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಮೋದಿ ಅವರು,  ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. 

ನರೇಂದ್ರ ಮೋದಿ ರಾಜ್ಯದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಅಪೇಕ್ಷೆ ಹೊಂದಿದ್ದಾರೆ. ಕಡಿಮೆ ಅವಧಿಯಲ್ಲಿ ಅಭ್ಯರ್ಥಿಗಳು ಎಲ್ಲ ಮನೆಗಳಿಗೆ ಭೇಟಿ ನೀಡಲು ಕಷ್ಟ ಸಾಧ್ಯವಾದ್ದರಿಂದ ಕಾರ್ಯಕರ್ತರು ಒಂದೊಂದು ಮನೆಯನ್ನು ಎರಡರಿಂದ ಮೂರು ಬಾರಿ ಸಂಪರ್ಕಿಸಿ, ಡಬಲ್ ಇಂಜಿನ್ ಸರ್ಕಾರದ ಸಾಧನೆ ಮತ್ತು ಯೋಜನೆಗಳನ್ನು ತಿಳಿಸಲಿದ್ದಾರೆ ಎಂದು ಅವರು ಹೇಳಿದರು.

ಇಂದಿನಿಂದ ಎರಡು ದಿನದ ವಿಶೇಷ ಮಹಾ ಪ್ರಚಾರ ಅಭಿಯಾನ’ ಆರಂಭವಾಗಿದೆ. ಎಲ್ಲ 224 ಕ್ಷೇತ್ರಗಳಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಳಿಗ್ಗೆ ಮಠ-ಮಂದಿಗಳಿಗೆ ಭೇಟಿ ನೀಡಿ ಆ ನಂತರ ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ. ಮನೆ-ಮನೆಗೂ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ತಿಳಿಸುತ್ತಿದ್ದಾರೆ. ಅಭಿಯಾನದ ಭಾಗವಾಗಿ ಸುದ್ದಿಗೋಷ್ಠಿಗಳು, ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಂವಾದ, ರೋಡ್‍ಶೋಗಳು, ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. 

ರಾಜ್ಯಸರ್ಕಾರ ಮುಸ್ಲೀಮರಿಗೆ ನೀಡಿರುವ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಂವಿಧಾನದ ಪ್ರಕಾರ ಧರ್ಮದ ಆಧಾರದಡಿ ಮೀಸಲಾತಿ ಒದಗಿಸಲು ಅವಕಾಶವಿಲ್ಲ. ಮುಸ್ಲಿಮರನ್ನು ಓಲೈಕೆ ಮಾಡಲು ಹಿಂದಿನ ಸರ್ಕಾರ ಮೀಸಲಾತಿ ಒದಗಿಸಿತ್ತು. ಮೀಸಲಾತಿ ರದ್ದು ಗೊಳಿಸಿದ ನಿರ್ಧಾರಕ್ಕೆ ಬಿಜೆಪಿ ಈಗಲೂ ಬದ್ಧವಾಗಿದೆ. ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸುವುದರಿಂದ ಪರಿಶಿಷ್ಟ ಜಾತಿ-ಪಂಗಡ ಮತ್ತು ಇತರ ವರ್ಗಗಳಿಗೆ ಅನ್ಯಾಯವಾಗಲಿದೆ. ಮೀಸಲಾತಿ ರದ್ದು ಆದೇಶ ತಡೆ ವಿಚಾರವಾಗಿ ರಾಜ್ಯ ಸರ್ಕಾರ ಮತ್ತೊಮ್ಮೆ ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಲಿದೆ ಎಂದು ಹೇಳಿದರು.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನವ ಕರ್ನಾಟಕ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದಾರೆ. ಆದರೆ ಕಾಂಗ್ರೆಸ್ ಸುಳ್ಳು, ಒಡೆದಾಳುವ, ದಾರಿತಪ್ಪಿಸುವ, ಒಂದು ಸಮುದಾಯವನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಜನರು ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಲಿದ್ದಾರೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ; ‘ಧುರಂದರ್’ ನಟ ನದೀಮ್ ಖಾನ್ ಬಂಧನ

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

SCROLL FOR NEXT