ಪ್ರಿಯಾಂಕಾ ಗಾಂಧಿ ವಾದ್ರಾ 
ರಾಜಕೀಯ

ರಾಜ್ಯ ಬಿಜೆಪಿ ಸರ್ಕಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ

ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.

ಟಿ. ನರಸೀಪುರ: ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಹೆಳವರಹುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರೆ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ರಾಜ್ಯದಲ್ಲಿ ಇದ್ದ ಶೇ.40 ಕಮಿಷನ್ ಸರ್ಕಾರ ನಿಮ್ಮನ್ನು ಲೂಟಿ ಮಾಡಿರುವುದು ಅತ್ಯಂತ ದುಃಖಕರ ಸಂಗತಿ. ಬಿಜೆಪಿಯವರು ಯಾವುದೇ ನಾಚಿಕೆ ಇಲ್ಲದೆ ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಿವಿಧ ಹಗರಣಗಳ ಆರೋಪಗಳು, ಗುತ್ತಿಗೆದಾರರ ಆತ್ಮಹತ್ಯೆ ಮತ್ತು ಗುತ್ತಿಗೆದಾರರಿಂದ ಪ್ರಧಾನಿಗೆ ಪತ್ರ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಿಯಾಂಕಾ ಗಾಂಧಿ, ಬಿಜೆಪಿಯಲ್ಲಿ ಅನೇಕ ಮಂದಿ ಶಾಮೀಲಾಗಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. 

ಬಿಜೆಪಿ ಸರ್ಕಾರ ದುರಾಡಳಿತ, ಸ್ವಜನ ಪಕ್ಷಪಾತದ ಸರ್ಕಾರವಾಗಿದೆ. ಶಾಸಕರೊಬ್ಬರ ಪುತ್ರನಿಂದ 8 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದರ ತನಿಖೆಗೆ ಸಹಕರಿಸದ ಶಾಸಕರು ಪರೇಡ್ ನಡೆಸಿದರು. ರಾಜ್ಯದಲ್ಲಿ ಒಂದೂವರೆ ಲಕ್ಷ ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಈ ಹಣವನ್ನು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಿತ್ತು, ಅದರಿಂದ ಜನರಿಗೆ ಅನುಕೂಲವಾಗುತ್ತಿತ್ತು ಎಂದರು. 

ಅಮುಲ್ ವರ್ಸಸ್ ನಂದಿನಿ ವಿವಾದ ಕುರಿತು ಪ್ರತಿಕ್ರಿಯಿಸಿದ ವಾದ್ರಾ, ಕರ್ನಾಟಕದ 'ನಂದಿನಿ' ಬ್ರಾಂಡ್ ನ್ನು ಕಾಂಗ್ರೆಸ್ ಬಲಪಡಿಸುತ್ತದೆ ಮತ್ತು ಹೊರಗಿನಿಂದ ಯಾವುದೇ ಸಹಕಾರಿ ಬರುವುದಿಲ್ಲ ಎಂದು ತಿಳಿಸಿದರು. ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ, ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT