ದೇವೇಗೌಡ 
ರಾಜಕೀಯ

ಮುಂದಿನ 11 ದಿನ 42 ಸ್ಥಳಗಳಲ್ಲಿ ಜೆಡಿಎಸ್ ಪರ ದೇವೇಗೌಡ ಪ್ರಚಾರ

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಳಿ ವಯಸ್ಸಿನಲ್ಲೂ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ನಾಳೆಯಿಂದ ಮುಂದಿನ 11 ದಿನಗಳಲ್ಲಿ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ನಡೆಸುವುದಾಗಿ ಗುರುವಾರ

ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಳಿ ವಯಸ್ಸಿನಲ್ಲೂ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ನಾಳೆಯಿಂದ ಮುಂದಿನ 11 ದಿನಗಳಲ್ಲಿ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ನಡೆಸುವುದಾಗಿ ಗುರುವಾರ ಹೇಳಿದ್ದಾರೆ.
         
ತಮ್ಮ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ವಿಶ್ರಾಂತಿ ತೆಗೆದುಕೊಳ್ಳುವುದಾಗಿ 89 ವರ್ಷದ ಮಾಜಿ ಪ್ರಧಾನಿ ತಿಳಿಸಿದ್ದಾರೆ.

ನಾಳೆಯಿಂದ ಮೇ 8ರವರೆಗೆ 42 ಕಡೆ ಪ್ರಚಾರ ನಡೆಸುತ್ತೇನೆ. ಇದೊಂದು ತಾತ್ಕಾಲಿಕ ಕಾರ್ಯಕ್ರಮ. ವಾರಕ್ಕೊಮ್ಮೆ ಇಂಜೆಕ್ಷನ್ ತೆಗೆದುಕೊಳ್ಳಬೇಕಾಗಿರುವುದರಿಂದ ಆರೋಗ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ದೇವೇಗೌಡ ಅವರು ಹೇಳಿದ್ದಾರೆ. ದೇವೇಗೌಡ ಅವರು ಮೇ 18ಕ್ಕೆ 90ನೇ ವರ್ಷಕ್ಕೆ ಕಾಲಿಡಲಿದ್ದಾರೆ.

ಇದನ್ನು ಓದಿ: ಮೋದಿ ಪ್ರಚಾರ ಅಸೆಂಬ್ಲಿ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರದು: ಹೆಚ್ ಡಿ ದೇವೇಗೌಡ (ಸಂದರ್ಶನ)
          
ಪಕ್ಷವು 211 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಅದರಲ್ಲಿ ಇಬ್ಬರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಮತ್ತು ಇಬ್ಬರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಹೀಗಾಗಿ ಜೆಡಿಎಸ್‌ನ 207 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ.
        
ಇದರ ಹೊರತಾಗಿ, ಜೆಡಿ-ಎಸ್ ಮೂರು ಸಿಪಿಐ-ಎಂ ಮತ್ತು ಮೂರು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಗಳಿಗೆ ತನ್ನ ಬೆಂಬಲವನ್ನು ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT