ಸಿದ್ದರಾಮಯ್ಯ 
ರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಜಾತಿ ಗಣತಿ ವರದಿ ಅಂಗೀಕಾರವಾಗಲಿದೆ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಆಧರಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಬುಧವಾರ ಭರವಸೆ ನೀಡಿದ್ದಾರೆ.

ಹೊಸಪೇಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಆಧರಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಬುಧವಾರ ಭರವಸೆ ನೀಡಿದ್ದಾರೆ.

ಹೂವಿನಹಡಗಲಿಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು 160 ಕೋಟಿ ರೂ.ಬಿಡುಗಡೆ ಮಾಡಿದ್ದೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ವರದಿಗೆ ಒಪ್ಪಿಗೆ ನೀಡಲಾಗುವುದು. ಜಾತಿ ಗಣತಿ ವರದಿಯನ್ನು ಅನುಸರಿಸಿ ಮತ್ತು ಅದರಂತೆ ಪ್ರತಿ ಜಾತಿಯ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ನಮಗೆ ಸ್ವಾತಂತ್ರ್ಯ ಸಿಕ್ಕ ನಂತರ ಜಾತಿ ಗಣತಿಯ ನಿಖರ ಅಂಕಿ-ಅಂಶಗಳನ್ನು ಪಡೆಯಲು ಯಾರೂ ಪ್ರಯತ್ನಿಸಲಿಲ್ಲ, ಬಿಜೆಪಿ ಸರ್ಕಾರ ವರದಿಯನ್ನು ಎಂದಿಗೂ ಒಪ್ಪುವುದಿಲ್ಲ, ಇದು ಹಿಂದುಳಿದ ವರ್ಗಗಳು ಮತ್ತು ದಲಿತರ ಬಗ್ಗೆ ಬಿಜೆಪಿ ಹೊಂದಿರುವ ಕಾಳಜಿಯನ್ನು ತೋರಿಸುತ್ತದೆ, ನಾನು ಭ್ರಷ್ಟಾಚಾರವನ್ನು ಟೀಕಿಸಿದರೆ, ಬಿಜೆಪಿಯವರು ನಾನು ಲಿಂಗಾಯತ ಸಮುದಾಯದ ವಿರೋಧಿ ಎಂದು ಜನರ ಹಾದಿಯನ್ನು ತಪ್ಪಿಸುತ್ತದೆ. ಲಿಂಗಾಯತರೆಲ್ಲರೂ ಭ್ರಷ್ಟರು ಎಂದು ನಾನು ಹೇಳಿರಲಿಲ್ಲ. ಬಸವರಾಜ ಬೊಮ್ಮಾಯಿ ಅತ್ಯಂತ ಭ್ರಷ್ಟ ಸಿಎಂ ಎಂದು ಮಾತ್ರ ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ