ರಾಜಕೀಯ

ರಾಜ್ಯ ವಿಧಾನಸಭೆ ಚುನಾವಣೆ: ನಾಳೆಯಿಂದಲೇ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ

Shilpa D

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಮೇ 10 ರಂದು ಚುನಾವಣೆಗೆ ಮತದಾನ ನಡೆಯಲಿದೆ. ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ.

2023ನೇ ಸಾಲಿನ ಸಾರ್ವತ್ರಿಕ ಚುನಾವಣೆಗೆ ಮತದಾನ ನಾಳೆಯಿಂದ ಆರಂಭವಾಗಲಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ನಾಳೆಯಿಂದ ಆರಂಭವಾಗಲಿದ್ದು, ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ.

ರಾಜ್ಯ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್ ಪೇಪರ್ ವೋಟಿಂಗ್ ಗೆ ಅವಕಾಶ ಇದೆ. 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲ ಚೇತನರಿಗೆ ಹಾಗೂ ಚುನಾವಣೆಯಲ್ಲಿ ಭಾಗವಹಿಸುವ ಪೊಲೀಸ್, ಚುನಾವಣೆ ಸಿಬ್ಬಂದಿಗೆ ನಾಳೆಯಿಂದ ಮತದಾನಕ್ಕೆ ಅವಕಾಶ ಸಿಕ್ಕಿದೆ.

80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆ ಬಳಿಯೇ ಮತ ಚಲಾಯಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಚುನಾವಣಾ ಅಯೋಗದ ಸಿಬ್ಬಂದಿಗಳು ಅವರ ಮನೆ ಬಾಗಿಲಿನಲ್ಲಿಯೇ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಈ ಮೂಲಕ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. 

ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಾಗಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೆಕಾರ್ಡಿಂಗ್ ಮಾಡಲಿದ್ದು, ಮತದಾನದ ನಂತರ ಸ್ಟ್ರಾಂಗ್ ರೂಮ್ ಗೆ ಮತ ಪೆಟ್ಟಿಗೆ ಶಿಫ್ಟ್ ಆಗಲಿದೆ.

ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆಯಿದ್ದು, ಇವರು ಕೂಡ ನಾಳೆಯಿಂದ ಬ್ಯಾಲೇಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ಓಪನ್ ಮಾಡಲಾಗುತ್ತದೆ.

SCROLL FOR NEXT