ರಾಜಕೀಯ

ಗಾಂಧಿನಗರ ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಮತ್ತು 'ಅಖಂಡ' ಪರ ಮಾಯಾವತಿ ಪ್ರಚಾರ!

Shilpa D

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಗಾಂಧಿ ನಗರದಿಂದ ಹಾಗೂ ಕಾಂಗ್ರೆಸ್ ಬಂಡಾಯ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ಪುಲಕೇಶಿನಗರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಈ ಇಬ್ಬರ ಪರ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಮೇ 5ರಂದು ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ.

ಈಗಾಗಲೇ ನನಗೆ ಮುಸ್ಲಿಂ, ದಲಿತ ಮತ್ತು ಕ್ರಿಶ್ಚಿಯನ್ ಬೆಂಬಲವಿದೆ , ಮಾಯಾವತಿ ಪ್ರಚಾರದಿಂದ ಪುಲಕೇಶಿನಗರದಿಂದ ಹೆಚ್ಚಿನ ಮತಗಳನ್ನು ಗಳಿಸಲು ಸಹಾಯ ಮಾಡುತ್ತದೆ ಎಂದು ಅಖಂಡ ಶ್ರೀನಿವಾಸ್ ಮೂರ್ತಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಗೆ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ 130 ಸ್ಥಾನಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಮೇ 5 ರಂದು ಅರಮನೆ ಮೈದಾನದಲ್ಲಿ ಪಕ್ಷದ ವರಿಷ್ಠರು ಸಮಾವೇಶ ನಡೆಸಲಿದ್ದಾರೆ ಎಂದು ಬಿಎಸ್‌ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ. ಕೋಮುವಾದಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಬಿಎಸ್‌ಪಿ ಅಗತ್ಯವಾಗಿದೆ ಎಂದಿದ್ದಾರೆ.

ಮಾಯಾವತಿ ಅವರು ಅರಮನೆ ಮೈದಾನದಿಂದ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದ್ದಾರೆ. ಗಾಂಧಿನಗರ ವಿಧಾನಸಭೆಯಿಂದ ಸ್ವತಂತ್ರ ಅಭ್ಯರ್ಥಿಯಾಗಿರುವ ಎನ್ ಕೃಷ್ಣಯ್ಯ ಶೆಟ್ಟಿ ಅವರಿಗೆ ಬಿಎಸ್ ಪಿ ಬೆಂಬಲಿಸುತ್ತದೆ, ಹಾಗೆಯೇ ತನ್ವೀರ್ ಸೇಠ್ ವಿರುದ್ಧ ನರಸಿಂಹರಾಜ ವಿಧಾನಸಭೆಯ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಅವರನ್ನು ಬೆಂಬಲಿಸಲಾಗುತ್ತದೆ" ಎಂದು ಕೃಷ್ಣಮೂರ್ತಿ ಹೇಳಿದರು.

ಬಡವರು, ದೀನದಲಿತರು, ಎಸ್‌ಸಿ/ಎಸ್‌ಸಿ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಕೆಲವು ಶಾಸಕರನ್ನು ಕಳುಹಿಸಲು  ಬಿಎಸ್‌ಪಿ ಶ್ರಮಿಸುತ್ತಿದೆ. ಅಖಂಡ ಶ್ರೀನಿವಾಸ ಮೂರ್ತಿ ಬಿಎಸ್‌ಪಿಗೆ ಸೇರ್ಪಡೆಯಾಗಿರುವುದು ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಿದೆ ಎಂದು ಬಿಎಸ್‌ಪಿ ಮುಖಂಡರು ಹೇಳಿದ್ದಾರೆ.

SCROLL FOR NEXT