ಸೋನಿಯಾ ಗಾಂಧಿ 
ರಾಜಕೀಯ

'ಪಾಕಿಸ್ತಾನ - ಚೀನಾ ದೇಶಗಳ ಏಜೆಂಟ್ ಆಗಿ ಕೆಲಸ ಮಾಡುವ ಸೋನಿಯಾ ಗಾಂಧಿ ವಿಷಕನ್ಯೆಯೇ?'

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಉತ್ಸಾಹದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ವಿಷಕನ್ಯೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯನ್ನು ವಿಷದ ಹಾವಿಗೆ ಹೋಲಿಸಿರುವ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಉತ್ಸಾಹದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ವಿಷಕನ್ಯೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿಯನ್ನು ಇಡೀ ಜಗತ್ತೇ ಒಪ್ಪಿಕೊಳ್ಳುತ್ತದೆ. ಒಂದು ಕಾಲದಲ್ಲಿ ಅಮೆರಿಕ ವೀಸಾ ನೀಡಿರಲಿಲ್ಲ. ಆದರೆ ಇಂದು ಅವರು ಅಮೆರಿಕಾಗೆ ಹೋಗುತ್ತಿದ್ದಂತೆ ಮೋದಿ ಅವರಿಗೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ನೀಡಲಾಗುತ್ತಿದೆ. ಇವತ್ತು ಮೋದಿ ಜಗತ್ತಿನ ನಾಯಕ. ಪಾಕಿಸ್ತಾನ ಮತ್ತು ಚೀನಾ ದೇಶಗಳ ಏಜೆಂಟ್ ಆಗಿ ಕೆಲಸ ಮಾಡುವ ಸೋನಿಯಾ ಗಾಂಧಿ ವಿಷಕನ್ಯೆಯೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೋದಿ ಬಗ್ಗೆ ನಮ್ಮ ಖರ್ಗೆ ಸಾಹೇಬ್ರು ಒಂದು ಸ್ಟೇಟ್​ಮೆಂಟ್​ ಕೊಟ್ಟಿದ್ದಾರೆ.  ಮೋದಿ ಅವರನ್ನು ನಾಗರಹಾವು ಎಂದು ಹೇಳಿದ್ದಾರೆ, ಪ್ರಧಾನಿ ಬಗ್ಗೆ ಮಾತನಾಡಿಯೇ ಗುಲ್ಬರ್ಗಾದಲ್ಲಿ ಏನಾಗಿತ್ತು ಎಂಬ ಬಗ್ಗೆ ಅರಿತುಕೊಳ್ಳಲಿ. ಖರ್ಗೆ ಅವರು ಹಿರಿಯರಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೇಗೆ ಮಾತಾಡಬೇಕು ಎಂದು ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

SCROLL FOR NEXT