ರಾಹುಲ್ ಗಾಂಧಿ 
ರಾಜಕೀಯ

ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂ., ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ರೂ. ಅನುದಾನ: ರಾಹುಲ್ ಗಾಂಧಿ 

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.

ಜೇವರ್ಗಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.

ಮಳೆಯ ನಡುವೆಯೂ ಕಲಬುರಗಿ ಜಿಲ್ಲೆಯ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕಾಂಗ್ರೆಸ್ ಮುಖ್ಯಸ್ಥರು, 50,000 ಸರ್ಕಾರಿ ಉದ್ಯೋಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು. ಈ ಪ್ರದೇಶಕ್ಕೆ 5,000 ಕೋಟಿ ರೂ., ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕೋಟಿ ರೂಪಾಯಿ ನಿಗದಿ ಮಾಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶವು ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿದೆ.

ಆಡಳಿತಾರೂಢ ಬಿಜೆಪಿಗೆ ‘ಈ ನಂಬರ್ ಇಷ್ಟವಾದ್ದರಿಂದ’ ಕೇವಲ 40 ಸೀಟುಗಳು ಬರುತ್ತವೆ ಎಂಬ ‘ಭವಿಷ್ಯ’ವನ್ನೂ ಅವರು ನುಡಿದರು.

ಕರ್ನಾಟಕದಲ್ಲಿ ಬಿಜೆಪಿ ಸಚಿವರು ಸಾರ್ವಜನಿಕ ಕಾಮಗಾರಿಗಳಿಗೆ ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ಸಂಗ್ರಹಿಸಿದ್ದು, ಪಕ್ಷಕ್ಕೆ 40ಕ್ಕಿಂತ ಹೆಚ್ಚು ಸ್ಥಾನಗಳು ಬರುವುದಿಲ್ಲ. ಕಾಂಗ್ರೆಸ್ 150 ಸ್ಥಾನಗಳನ್ನು ಗೆದ್ದು ಮುಂದಿನ ಸರ್ಕಾರ ರಚಿಸಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು 'ಕಳ್ಳತನದ ಸರ್ಕಾರ' ಎಂದು ಕರೆದ ಅವರು, ಆಡಳಿತ ಪಕ್ಷವು ವಿರೋಧ ಪಕ್ಷದ ಶಾಸಕರನ್ನು ಖರೀದಿಸಿದೆ. ನಾವು ಸರ್ಕಾರ ರಚನೆ ಮಾಡಲಿದ್ದೇವೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಅವರು ಕಾಂಗ್ರೆಸ್‌ನ ನಾಲ್ಕು ಪ್ರಮುಖ 'ಖಾತರಿ'ಗಳನ್ನು ಪುನರುಚ್ಚರಿಸಿದರು. ಕುಟುಂಬದ ಮುಖ್ಯಸ್ಥ ಮಹಿಳೆಗೆ 2,000 ರೂ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್, ಎರಡು ವರ್ಷಗಳವರೆಗೆ ನಿರುದ್ಯೋಗಿ ಪದವೀಧರರಿಗೆ 3,000 ರೂ. ಮತ್ತು ನಿರುದ್ಯೋಗಿ ಡಿಪ್ಲೋಮಾ ಹೊಂದಿರುವವರಿಗೆ 1,500 ರೂ. (ಇಬ್ಬರೂ 18 ವರ್ಷದಿಂದ 25 ವರ್ಷ ವಯಸ್ಸಿನವರಿಗೆ) ಮತ್ತು ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿದರು.

ಇದಲ್ಲದೆ, ಗಾಂಧಿ ಗುರುವಾರ ಪಕ್ಷದ ಐದನೇ 'ಖಾತರಿ'ಯನ್ನು ಘೋಷಿಸಿದರು. ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ನೀಡುವುದಾಗಿ ಕಾಂಗ್ರೆಸ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT