ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಕರ್ನಾಟಕ ಚುನಾವಣೆ: ನಾಳೆ ಜೆಪಿ ನಡ್ಡಾರಿಂದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
Nagaraja AB
Updated On : 30 Apr 2023, 8:04 pm

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪಕ್ಷದ ಪ್ರಣಾಳಿಕೆಯು ಯುವಜನರ ಕಲ್ಯಾಣ ಕ್ರಮಗಳು, ಮೂಲಸೌಕರ್ಯ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸಬಹುದು ಎನ್ನಲಾಗಿದೆ.ಇದಲ್ಲದೆ, ಮೊದಲ ಬಾರಿಯ ಮತದಾರರ ಮನಗೆಲ್ಲಲು 12 ನೇ ತರಗತಿಯಲ್ಲಿ ಉತ್ತೀರ್ಣರಾದ ಯುವಕರು ಮತ್ತು ವಿದ್ಯಾರ್ಥಿನಿಯರಿಗೆ ವಿಶೇಷ ಘೋಷಣೆ ಹೊರಬೀಳಬಹುದು ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ 6ನೇ ಗ್ಯಾರಂಟಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15 ಸಾವಿರ ರೂಗೆ ಹೆಚ್ಚಳ: ಪ್ರಿಯಾಂಕಾ ಗಾಂಧಿ ಭರವಸೆ

Advertisement

Advertisement

2018 ರ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಸಮಾಜದ ಪ್ರತಿಯೊಂದು ವರ್ಗವನ್ನು ಮುಟ್ಟಿದೆ. ಗೋಸಂರಕ್ಷಣಾ ಕ್ರಮಗಳನ್ನೂ ಪ್ರಣಾಳಿಕೆಯಲ್ಲಿ ಪಕ್ಷ ಸೇರಿಸಿತ್ತು. 

ಈ ಮಧ್ಯೆ, ಭಾನುವಾರ ಕೋಲಾರದಲ್ಲಿ ನಡೆದ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಾವಿನ ನಡುವಿನ ಹೋಲಿಕೆ ಕುರಿತು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಜನತೆ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments