ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ 
ರಾಜಕೀಯ

ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ: ಜಗದೀಶ್ ಶೆಟ್ಟರ್, ಸವದಿಗೆ ಆಹ್ವಾನ; ಲೋಕಸಭೆ ಚುನಾವಣೆ ಜವಾಬ್ದಾರಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಸೇರಿದಂತೆ ಕರ್ನಾಟಕದ ಪ್ರಮುಖ ನಾಯಕರು ಬುಧವಾರ ನವದೆಹಲಿಯಲ್ಲಿ  ನಡೆಯುವ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಭಾಗವಹಿಸಲಿದ್ದಾರೆ,  2024 ರ ಲೋಕಸಭೆ ಚುನಾವಣೆಯ ಬಗ್ಗೆ ಚರ್ಚಿಸುವುದು ಸಭೆಯ ಮುಖ್ಯ ಅಜೆಂಡಾವಾಗಿದೆ.

ಬೆಂಗಳೂರು: ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಗೆಲುವು ಸಾಧಿಸಿದೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ನಿಟ್ಟಿನಲ್ಲೂ ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ. ಗ್ಯಾರಂಟಿಗಳ ಸಮರ್ಪಕವಾದ ಜಾರಿ ಲೋಕಸಭಾ ಚುನಾವಣೆಯಲ್ಲೂ ಪರಿಣಾಮ ಬೀರಬಹುದು ಎಂಬುವುದು ಕೈಪಡೆಯ ಲೆಕ್ಕಾಚಾರ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಸೇರಿದಂತೆ ಕರ್ನಾಟಕದ ಪ್ರಮುಖ ನಾಯಕರು ಬುಧವಾರ ನವದೆಹಲಿಯಲ್ಲಿ  ನಡೆಯುವ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಭಾಗವಹಿಸಲಿದ್ದಾರೆ,  2024 ರ ಲೋಕಸಭೆ ಚುನಾವಣೆಯ ಬಗ್ಗೆ ಚರ್ಚಿಸುವುದು ಸಭೆಯ ಮುಖ್ಯ ಅಜೆಂಡಾವಾಗಿದೆ.

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಯೋಜನೆ ಸೇರಿದಂತೆ, ಚುನಾವಣೆಯ ನಿರ್ಣಾಯಕ  ಕಾರ್ಯತಂತ್ರಗಳ ಕುರಿತು ಹಿರಿಯ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳನ್ನು ಗೆಲ್ಲುವ ಉದ್ದೇಶ ಹೊಂದಿರುವ ಕಾಂಗ್ರೆಸ್, ವಿಧಾನಸಭೆ ಚುನಾವಣೆಗೆ ಮುನ್ನವೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಸಭೆಗೆ ಹೈಕಮಾಂಡ್ ಆಹ್ವಾನಿಸಿದೆ.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಸ್ತಾಪಿಸುವಂತೆ ರಾಜ್ಯ ನಾಯಕರಿಗೆ ಮನವಿ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ತಿಳಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರ ಬದಲಾವಣೆ ಮತ್ತು ಪೂರ್ಣಾವಧಿ ಕಾರ್ಯದರ್ಶಿ ನೇಮಕದ ಬಗ್ಗೆಯೂ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಗೆ ಸಚಿವರನ್ನು ಕಣಕ್ಕಿಳಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಇನ್ನೂ ಚರ್ಚೆ ನಡೆದಿಲ್ಲ. ಒಂದು ವೇಳೆ ಹೈಕಮಾಂಡ್ ತೀರ್ಮಾನಿಸಿದರೆ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ನಾವೂ ಸ್ಪರ್ಧಿಸಬೇಕಾಗುತ್ತದೆ ಎಂದರು.

ಆದರೆ, ಸಚಿವರ ವಿರುದ್ಧ ಕೆಲವು ಶಾಸಕರು ಅದರಲ್ಲೂ ಆಳಂದ ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನದ ಬಗ್ಗೆ ಹೈಕಮಾಂಡ್ ಚರ್ಚೆ ನಡೆಸುವುದನ್ನು ತಳ್ಳಿಹಾಕಿದರು. "ಅವರಿಗೆ ನೋವಾಗಿದ್ದರೇ ನಾವು ಅದನ್ನು  ಸರಿಪಡಿಸುತ್ತೇವೆ. ರಾಜಕಾರಣ ನಿಂತ ನೀರಲ್ಲ, ಅತೃಪ್ತರಿಗೆ ಮನವರಿಕೆ ಮಾಡಿಕೊಡುವುದು ನಿತ್ಯದ ಪ್ರಕ್ರಿಯೆ’ ಎಂದು ಅವರು ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್,  ಶಾಸಕರ ಅಸಮಾಧಾನದ ಬಗ್ಗೆ ಸಭೆಯಲ್ಲಿ ಹೈಕಮಾಂಡ್ ಚರ್ಚಿಸುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ. ಬದಲಾಗಿ ಪಕ್ಷದ ಸಂಘಟನೆ, ನೀತಿ ಮತ್ತು ಸಂಸದೀಯ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.

ನರೇಂದ್ರ ಮೋದಿ ಸರಕಾರ ಆಡಳಿತ ವಿರೋಧಿ ಧೋರಣೆ ಎದುರಿಸುತ್ತಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತುಮಕೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.

ಜನರು ಬದಲಾವಣೆಯನ್ನು ನಿರೀಕ್ಷಿಸಿದಾಗ (2014 ರಲ್ಲಿ) ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಹತ್ತು ವರ್ಷಗಳನ್ನು ಪೂರೈಸಿದ್ದರು. ಅಂತೆಯೇ ಮೋದಿಯವರು ಹತ್ತು ವರ್ಷ ತಲುಪಿದ್ದಾರೆ ಮತ್ತು ಬದಲಾವಣೆ ಆಗಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT