ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ (ಸಾಂದರ್ಭಿಕ ಚಿತ್ರ) 
ರಾಜಕೀಯ

ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಆಗಸ್ಟ್ 3 ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3 ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3 ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದ ನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಿದ ನಂತರ ಇದು ಪ್ರಧಾನಿಯೊಂದಿಗಿನ ಅವರ ಮೊದಲ ಭೇಟಿಯಾಗಿದೆ. 

ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ಅದೇ ದಿನ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಅದು ತಿಳಿಸಿದೆ.

ಅಲ್ಲದೆ, 2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಆಗಸ್ಟ್ 2 ರಂದು ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರೊಂದಿಗೆ  ಪಕ್ಷದ ವರಿಷ್ಠರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT