ಎಚ್.ಡಿ ಕುಮಾರಸ್ವಾಮಿ ಮತ್ತು ನರೇಂದ್ರ ಮೋದಿ 
ರಾಜಕೀಯ

'ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ಮೋದಿ ಪ್ರಧಾನಿ ಆಗ್ಬಿಟ್ಟ; ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ, ಸಿಎಂ ಆಗ್ಬಿಟ್ಟ'

ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಪ್ರತಿಕ್ರಿಯೆ ನೀಡಿದ ಅವರು, ನೀವು (ಕಾರ್ಯಕರ್ತ) ದುಖಃ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹ ಬೇಕು ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಕೊಪ್ಪಳ: ಎಲ್ ಕೆ ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ನರೇಂದ್ರ ಮೋದಿ ಪ್ರಧಾನಿ ಆಗಿಬಿಟ್ಟ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ನಾಲಗೆ ಹರಿಬಿಟ್ಟಿದ್ದಾರೆ.

ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಸಭೆಯಲ್ಲಿ, ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಪ್ರತಿಕ್ರಿಯೆ ನೀಡಿದ ಅವರು, ನೀವು(ಕಾರ್ಯಕರ್ತ) ದುಖಃ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹ ಬೇಕು ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ದೇವೆಗೌಡರ ಕ್ಯಾಬಿನೆಟ್‌ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು.‌ ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು, ಮುಖ್ಯಮಂತ್ರಿ ಆಗಿಬಿಟ್ಟ.

ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬಂದು ಎರಡು ಭಾರಿ ಸಿಎಂ ಆಗಿದ್ದಾರೆ.‌ ಕಾಂಗ್ರೆಸ್‌ನ ಹಳೆ (ಮೂಲ) ಮಂದಿ ಏನಂತಿರಬಹುದು? ಇದೆಲ್ಲಾ ಮನುಷ್ಯನ ಅದೃಷ್ಟ ಎಂದು ಹೇಳಿದ್ದಾರೆ. ನನ್ನ ಹಿಂದೆ ಓಡಾಡಿದವರೆಲ್ಲಾ ಮಂತ್ರಿ ಆಗಿದ್ದಾರೆ.‌ ಅವರ ಅಪ್ಪಂದಿರ ಜತೆ ನಾನು ಕೆಲಸ‌ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು ಮಾಡ್ಕೊಂಡು ಓಡುತ್ತಿದ್ದಾರೆ. ಎಸ್‌.ಆರ್‌ ಬೊಮ್ಮಾಯಿ ಅವರ ಅವಧಿಯಲ್ಲಿ ನಾನು ಎಂಎಲ್‌ಎ, ಎಂಪಿ ಆಗಿದ್ದೆ. ದೇವೆಗೌಡರ ಕ್ಯಾಬಿನೆಟ್‌ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು.‌ ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ.

ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು ಮುಖ್ಯಮಂತ್ರಿ ಆಗಿಬಿಟ್ಟ ಎಂದು ಹೇಳಿದ್ದಾರೆ.‌ ಈ ಮೊದಲು, ಎಲ್.ಕೆ.ಅಡ್ವಾಣಿ ಬಿಜೆಪಿ ಕಟ್ಟಿದ್ದು, ಮೋದಿ ಪ್ರಧಾನ ಮಂತ್ರಿ ಆಗ್ಬಿಟ್ಟ ಎಂದು ಅನಗತ್ಯವಾಗಿ ಬಿಜೆಪಿ ಹಿರಿಯ ನಾಯಕರ ಬಗ್ಗೆ ಏಕ ವಚನದಲ್ಲಿ ಬಸವರಾಜ ರಾಯರೆಡ್ಡಿ ಮಾತನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT