ಸಿಎಂ ಸಿದ್ದರಾಮಯ್ಯ 
ರಾಜಕೀಯ

ಹೆಚ್.ಡಿ. ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಕೇಸ್ ಇದ್ದಂತೆ: ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಇನ್ಸ್ ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು  ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಹಿಂದೆ ಪೆನ್‍ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು ಪೆನ್‍ಡ್ರೈವ್ ಇದ್ದರಲ್ಲವೇ ಹೊರಗೆಬಿಡುವುದು ಎಂದರು. 

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು ಅಕ್ಕಿ ನೀಡುವುದಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ದಾರೆ ಎಂದು ತಿಳಿಸಿದರು. 

ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರ ಮಟ್ಟದಲ್ಲಿ ವೈಎಸ್ ಟ್ಯಾಕ್ಸ್ ಜೋರಾಗಿ ನಡೆಯುತ್ತಿದೆ ಎಂದು ಆರೋಪಿಸಿದರು.

ಪೊಲೀಸ್ರು ಜನ ಸಾಮಾನ್ಯರಿಗೆ ಯಾವ ಮಟ್ಟದ ರಕ್ಷಣೆ ನೀಡಬಹುದು. ಗರುಡಾ ಮಾಲ್ ಬಳಿಯ ಪೊಲೀಸ್ ಮೆಸ್​ನಲ್ಲಿ ಸಭೆ ನಡೆಯಬೇಕಿದ್ರೆ ಯಾರಿದ್ದರು. ವೈಎಸ್ ವಿ ಟ್ಯಾಕ್ಸ್ ನವರು ಅಲ್ಲೇ ಇದ್ರು ಅಲ್ವಾ? ಅಧಿಕಾರಿಗಳ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿಗಳು, ಗೃಹ ಸಚಿವರು ಚರ್ಚೆ ಮಾಡುವಾಗ ವೈಎಸ್ ವಿ ಟ್ಯಾಕ್ಸ್ ನವರು ಯಾಕಿದ್ದರು. ಅವರನ್ನ ಇಟ್ಕೊಂಡು ಚರ್ಚೆ ಮಾಡಿದ್ರೆ ಈ ಆಡಳಿತ ಎಲ್ಲಿಗೆ ಬಂತು ಎಂದು ಪ್ರಶ್ನಿಸಿದರು.

ಈಗ 32 ಸಚಿವರನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ‌. ರಿಪೋರ್ಟ್ ಕಾರ್ಡ್ ಬಿಡೋದಕ್ಕೆ ಅಲ್ಲಿಗೆ ಹೋಗಿದ್ದಾರೆ. ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಬೇಕಿರೋದು ಜನತೆ ಮುಂದೆ, ಹೈಕಮಾಂಡ್ ಮುಂದಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT