ನರೇಂದ್ರ ಮೋದಿ 
ರಾಜಕೀಯ

ರಾಜ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ಮೋದಿ ಟವಲ್ ಹಾಕಿದ್ದಾರಾ; ನಮ್ಮ ಗ್ಯಾರಂಟಿ ಯೋಜನೆಗಳು ಅವರ ನಿದ್ದೆಗೆಡಿಸಿವೆಯೇ?

ಕರ್ನಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ  ಅವರೇ ವಹಿಸಿಕೊಂಡಂತಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

ಬೆಂಗಳೂರು: ಕರ್ನಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ವಹಿಸಿಕೊಂಡಂತಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬೇರೆಲ್ಲಾ ಕೆಲಸ ಬಿಟ್ಟು ಕರ್ನಾಟಕದ ಬಗ್ಗೆ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ನಿರಂತರವಾಗಿ ಮಾತಾಡುತ್ತಿದ್ದಾರೆ, ವಿಪಕ್ಷ ನಾಯಕನ ಸ್ಥಾನಕ್ಕೆ ಮೋದಿಯರು ಟವಲ್ ಹಾಕಿದ್ದಾರಾ ಎಂದು ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.

ಮಣಿಪುರ, ಹರ್ಯಾಣಗಳ ಹೊತ್ತಿ ಉರಿದರೂ ಅತ್ತ ಸುಳಿಯದ ಪ್ರಧಾನಿಗೆ ನಮ್ಮ ಸರ್ಕಾರದ ಮೇಲೆ ಏಕಿಷ್ಟು ಆಸಕ್ತಿ? ಯಶಸ್ವಿಯಾದ ನಮ್ಮ ಗ್ಯಾರಂಟಿ ಯೋಜನೆಗಳು ಮೋದಿಯವರ ನಿದ್ದೆಗೆಡಿಸಿವೆಯೇ? ಎಂದು ತಪರಾಕಿ ಹಾಕಿದೆ.

ಮಧ್ಯಪ್ರದೇಶದಲ್ಲಿ ದಲಿತರಿಗೆ ಮೂತ್ರ ಕುಡಿಸಲಾಗುತ್ತಿದೆ, ಹರ್ಯಾಣ ಗಲಭೆಯಲ್ಲಿ ಹೊತ್ತಿ ಉರಿಯುತ್ತಿದೆ, ಮಣಿಪುರದಲ್ಲಿ ಮಹಿಳೆಯರನ್ನು ಅತ್ಯಾಚಾರ ಎಸಗಿ ಬೆತ್ತಲೆ ಮೆರವಣಿಗೆ ಮಾಡಲಾಗುತ್ತಿದೆ, ಎಲ್ಲವೂ ಬಿಜೆಪಿ ಆಡಳಿತದ ರಾಜ್ಯಗಳೇ, ಕರ್ನಾಟಕದ ಬಗ್ಗೆ ಮಾತಾಡುವ ಪ್ರಧಾನಿ ನರೇಂದ್ರ ಮೋದಿ  ತಮ್ಮ ಡಬಲ್ ಇಂಜಿನ್ ರಾಜ್ಯಗಳ ಅವಾಂತರಗಳನ್ನು ಗಮನಿಸಲಿ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel