ಎಚ್‌ಡಿ ಕುಮಾರಸ್ವಾಮಿ 
ರಾಜಕೀಯ

'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್‌ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ. 

ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರದ ವಿರುದ್ಧ ಆರೋಪ ಮಾಡಿದರೆ ಸಾಲದು, ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ, ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ, ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಅವರು ಪದೇ ಪದೆ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು? ಎಂದಿದ್ದಾರೆ.

ಮುಂದುವರಿದು, ಎಚ್‌ಡಿ ಕುಮಾರಸ್ವಾಮಿಯವರು ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಆಗುವ ಕನಸು ಕಂಡಿದ್ದರು. ಆದರೆ, ಜನರು ಚುನಾವಣೆಯಲ್ಲಿ ಅವರ 'ಕಿಂಗ್ ಮೇಕರ್' ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕಟ್ಟಡದ ಮೆಟ್ಟಿಲು ಕುಸಿತ; ಬಿಜೆಪಿ ಶಾಸಕ ವೇದ ಪ್ರಕಾಶ್ ಗುಪ್ತಾ ಕೂದಲೆಳೆ ಅಂತರದಲ್ಲಿ ಪಾರು! video

3 ತಿಂಗಳಿಗೆ ಮುರಿದು ಬಿತ್ತ ಪೃಥ್ವಿ ಶಾ ನಿಶ್ಚಿತಾರ್ಥ?: ಪ್ರತಿ ಹಂತದಲ್ಲೂ ನನಗೆ ಮೋಸವಾಗಿದೆ; ಅಕೃತಿ ರಹಸ್ಯ ಪೋಸ್ಟ್ ವೈರಲ್!

ಮುಂಬೈನಲ್ಲಿ ಭಾರಿ ಮಳೆ: ಅಂಗಡಿ ಮೇಲೆ ಮರ ಬಿದ್ದು ವ್ಯಕ್ತಿ ಸಾವು, ಮುಂಗಾರು ಸಂಬಂಧಿತ ಸಾವಿನ ಸಂಖ್ಯೆ 3ಕ್ಕೆ ಏರಿಕೆ, Video

ಕರ್ನಾಟಕದಲ್ಲಿ ಜುಲೈ 10ರವರೆಗೆ ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್‌: IMD

1,000 ಟನ್‌ ಕ್ರೋಢೀಕರಣ ಗುರಿ; ಮನೆಯ ಚಿನ್ನ ಠೇವಣಿ ಇಡಲು ಉತ್ತೇಜನ; ಹೊಸ Gold Monetisation Scheme ಘೋಷಿಸಲಿರುವ ಕೇಂದ್ರ