ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಕುಮಾರಸ್ವಾಮಿ ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕುಮಾರಸ್ವಾಮಿ ಅವರ ಇತ್ತೀಚಿನ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ- ಡಿಕೆ ಶಿವಕುಮಾರ್

ಡಿಸಿೆಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ
Srinivas Rao BV
Updated On : 6 Aug 2023, 12:37 pm

ಬೆಂಗಳೂರು: "ಕುಮಾರಸ್ವಾಮಿ ಅವರ ಇತ್ತೀಚಿನ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸುತ್ತಾ ಈ ವಿಚಾರ ಪ್ರಸ್ತಾಪಿಸಿದರು.

"ನಾಳೆಯಿಂದ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ನಾಯಕರುಗಳ ಜೊತೆ ಸಭೆ ಮಾಡುತ್ತಿದ್ದು, ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು ಪಕ್ಷದ ಅಲ್ಪಸಂಖ್ಯಾತ ನಾಯಕರ ಜೊತೆ ಸಭೆ ಮಾಡುತ್ತಿದ್ದೇನೆ" ಎಂದು ತಿಳಿಸಿದರು.

Advertisement

Advertisement

ಇದನ್ನೂ ಓದಿ: ನೈಸ್ ಯೋಜನೆ ಅಕ್ರಮ ಕುರಿತು ದೆಹಲಿಯಲ್ಲಿ ಪುರಾವೆ ಬಿಡುಗಡೆ; ಪ್ರಧಾನಿ ಮೋದಿಗೆ ದಾಖಲೆ ನೀಡುತ್ತೇನೆ: ಎಚ್ ಡಿ ಕುಮಾರಸ್ವಾಮಿ

ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್ (ನೈಸ್) ಯೋಜನೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸುವುದಾಗಿ ಹೆಚ್ ಡಿ ಕುಮಾರಸ್ವಾಮಿ ನೆನ್ನೆ ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement