ಬಿಜೆಪಿ ಟ್ವೀಟ್ 
ರಾಜಕೀಯ

'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ನವರೇ ಕೂಡಲೇ ಕೃಷಿ ಸಚಿವರ ರಾಜಿನಾಮೆ ಪಡೆಯಿರಿ'

ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು  ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ  ಬಿಜೆಪಿ, ಈ ಹಿಂದೆ ಶಾಸಕರ ಪತ್ರ ನಕಲು ಎಂದಿದ್ದ ನೀವು, ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಹೇಗೆ..? ಎಂದು ಬಿಜೆಪಿ ಪ್ರಶ್ನಿಸಿದೆ.

ಕಪೋಲಕಲ್ಪಿತ ಸುಳ್ಳು ಆರೋಪಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ  ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದೆ. ಸಚಿವರಾದ ಮೊದಲ ದಿನದಿಂದಲೇ ವಸೂಲಿ, ವರ್ಗಾವಣೆ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದ ಚೆಲುವರಾಯಸ್ವಾಮಿ, 6 ರಿಂದ 8 ಲಕ್ಷ ರೂಪಾಯಿ ಕಮಿಷನ್‌ಗಾಗಿ ತನ್ನ ಇಲಾಖೆಯ ಮೇಲಾಧಿಕಾರಿಗಳನ್ನು ಕಲೆಕ್ಷನ್ ಏಜೆಂಟ್‌ಗಳನ್ನಾಗಿ ಮಾಡಿಕೊಂಡಿದ್ದಾರಂತೆ ನೋಡಿ ಎಂದು ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ ಒಂದೇ ಗ್ಯಾರಂಟಿ. ಮಾನ್ಯ ಸಿದ್ದರಾಮಯ್ಯನವರೇ, ಇದರಲ್ಲಿ ಯಾರ್ಯಾರ ಪಾಲೆಷ್ಟು..? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!