ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ 
ರಾಜಕೀಯ

ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ; ಆಕಸ್ಮಿಕವಲ್ಲ, ಷಡ್ಯಂತ್ರ ಎಂದ ಕಾಂಗ್ರೆಸ್

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ...

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ.

ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ ಎಂದು ದೂರಿದೆ.

40 ಪರ್ಸೆಂಟ್ ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಮತ್ತು ಇದರ ಹಿಂದಿರುವ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್ ಗುಡುಗಿದೆ.

ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬಿಬಿಎಂಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಎಂಟು ನೌಕರರಿಗೆ ಗಾಯವಾಗಿದೆ, ಮೂರು ಜನರ ಸ್ಥಿತಿ ಗಂಭೀರವಾಗಿದೆ, ಇವರೆಲ್ಲರಿಗೂ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.

ತನಿಖೆಗೆ ಹೆದರಿದ ಭ್ರಷ್ಟರು ನಡೆಸಿದ ಇಂತಹ ಹೀನ ಕೃತ್ಯದ ಹಿಂದಿರುವ ಕೈಗಳಿಗೆ ಕೊಳ ತೊಡಿಸುವುದು ಖಚಿತ.

ಈ ಹಿಂದೆ ಬಿಜೆಪಿ ಆಡಳಿತವಧಿಯಲ್ಲಿ ಬಿಬಿಎಂಪಿಗೆ ಬೆಂಕಿ ಇಟ್ಟವರೇ ಇಂದೂ ಸಹ ಇಟ್ಟಿದ್ದಾರೆ ಎಂಬ ಗುಮಾನಿ ಹೆಚ್ಚಿದೆ.

ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ತೆರೆಮರೆಯಲ್ಲಿರುವ ಭ್ರಷ್ಟರನ್ನು ಬಯಲಿಗೆಳೆಯುತ್ತೇವೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT