ರವಿಕುಮಾರ್. 
ರಾಜಕೀಯ

'ಪೇಸಿಎಂ' ಪೋಸ್ಟರ್ ಅಭಿಯಾನ ಬಳಿಕ ಪೊಲೀಸರಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ರವಿಕುಮಾರ್

ಪೇಸಿಎಂ ಪೋಸ್ಟರ್ ಅಭಿಯಾನ ಬಳಿಕ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೆದರಿಸಿ, ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಬೆಂಗಳೂರು: ಪೇಸಿಎಂ ಪೋಸ್ಟರ್ ಅಭಿಯಾನ ಬಳಿಕ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೆದರಿಸಿ, ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಅವರು ಉನ್ನತ ಪೊಲೀಸ್‌ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ  ಸುದ್ದಿಗಾರರ ಜತೆ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರದ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಕರ್ತರನ್ನು ಹೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಪೊಲೀಸರು ನಮ್ಮ ಕಾರ್ಯಕರ್ತರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಐಟಿ ಸೆಲ್ ಸರ್ಕಾರದ ಪ್ರತಿಯೊಂದು ಹಂತದಲ್ಲೂ ಹೆಚ್ಚುತ್ತಿರುವ ಭ್ರಷ್ಟಾಚಾರದ ಬಗ್ಗೆ ಆಡಳಿತ ಪಕ್ಷವನ್ನು ಪ್ರಶ್ನಿಸುತ್ತಿದೆ. ಇದು ಯಾವುದೇ ರಾಜಕೀಯ ಪಕ್ಷದ ಹಕ್ಕು, ತಮ್ಮ ತಪ್ಪುಗಳನ್ನು ಸರಿಪಡಿಸುವ ಬದಲು, ಅವರು ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ