ಸಾಂದರ್ಭಿಕ ಚಿತ್ರ 
ರಾಜಕೀಯ

2024ರ ಲೋಕಸಭೆ ಚುನಾವಣೆಗೆ ಏಳು ತಿಂಗಳು ಬಾಕಿ: ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ತೀವ್ರ ಪೈಪೋಟಿ!

2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ.

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ.

ಬೆಂಗಳೂರು ಕೇಂದ್ರ ಭಾಗದಿಂದ ಮಾಜಿ ಸಚಿವ ಎಚ್‌ಎಂ ರೇವಣ್ಣ ಹಾಗೂ ಯುವ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ನಲಪಾಡ್‌ ತೀವ್ರ ಪೈಪೋಟಿ ನಡೆಸುತ್ತಿದ್ದರೆ, ಮಾಜಿ ಸಂಸದ ವಿಎಸ್‌ ಉಗ್ರಪ್ಪ ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಲಾಬಿ ನಡೆಸುತ್ತಿದ್ದಾರೆ. 

ಕಳೆದ 2019ರ ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಸೋತಿದ್ದ ಬೆಳಗಾವಿ ಕ್ಷೇತ್ರಕ್ಕೂ ಹೆಚ್ಚಿನ ಬೇಡಿಕೆ ಇದೆ. ಈ ಬಾರಿ ಪಕ್ಷ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮೈಸೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿಯ ಜೊತೆಗೆ ಕೋಲಾರವನ್ನು ಎರಡನೇ ಸ್ಥಾನವಾಗಿ ಆಯ್ಕೆ ಮಾಡಬಹುದು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಕೋಲಾರದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಿಂದ ಸ್ಪರ್ಧಿಸಲು ಖರ್ಗೆ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ತುಮಕೂರಿನಲ್ಲಿ ಹಿಂದಿನ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಪಕ್ಷದಿಂದ ಹೊರನಡೆದಿದ್ದು, ಜಿ.ಎಸ್.ಬಸವರಾಜ್ ಅವರು ಅಲ್ಲಿಂದ ಸ್ಪರ್ಧಿಸದಿರಬಹುದು ಎಂದು ಪರಿಗಣಿಸಿ ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದ 28 ಕ್ಷೇತ್ರಗಳ ಪೈಕಿ ಗೆದ್ದಿದ್ದು ಕೇವಲ ಎರಡು ಕ್ಷೇತ್ರ. 

ಕಳೆದ ನಾಲ್ಕು ಬಾರಿ ಕೆಲವು ಕಾಂಗ್ರೆಸ್ ನಾಯಕರು ಸೋತಿರುವುದರಿಂದ ಗೆಲ್ಲುವ ಅಭ್ಯರ್ಥಿಗಳ ಕೊರತೆ ಎದ್ದು ಕಾಣುತ್ತಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಸೋತ ಹಲವರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಬಿಜೆಪಿ ಪಕ್ಷವು 14-15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುವ ಸೂಚನೆಯನ್ನು ನೀಡಿದ್ದು, ರಾಜ್ಯದಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗಳನ್ನು ನೋಡಿಕೊಂಡು ಅಳೆದು ತೂಗಿ ರಾಜಕೀಯ ಲೆಕ್ಕಾಚಾರ ಹಾಕಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT