ಅಶ್ವತ್ಥನಾರಾಯಣ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ರಾಮನಗರದಲ್ಲಿ ಬಿಜೆಪಿ ಕ್ಲೀನ್ ಮಾಡಿದ 'ನವರಂಗಿ ನಾರಾಯಣ'; ಸಿ.ಟಿ ರವಿಗೆ ಟ್ರೀಟ್ಮೆಂಟ್ ಅಗತ್ಯವಿದೆ: ಡಿಸಿಎಂ ಡಿಕೆಶಿ ಟಕ್ಕರ್

ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ಆರೋಪದಲ್ಲಿ ಲೋಕಾಯುಕ್ತ ತನಿಖೆಗೆ ಒತ್ತಾಯಿಸುವ ಬಿಜೆಪಿ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಡಿ. ಶಿವಕುಮಾರ್ ಬಿಜೆಪಿ ನಾಯಕರಿಗೆ ಏನೇನು ಮಾಡಲು ಸಾಧ್ಯವೋ ಎಲ್ಲವನ್ನು ಮಾಡಲಿ ಎಂದು ಸವಾಲು ಹಾಕಿದರು.

ಅಶ್ವಥ್ ನಾರಾಯಣ್ ಅವರನ್ನು ನವರಂಗಿ (ಊಸರವಳ್ಳಿ) ನಾರಾಯಣ ಎಂದು ಕರೆಯಬೇಕು. ಕಳ್ಳರನ್ನು ರಕ್ಷಿಸಿದ ಅವರಿಗೆ ಡಾಕ್ಟರೇಟ್ ನೀಡಬೇಕು. ರಾಮನಗರಕ್ಕೆ ಬಂದು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡುವುದಾಗಿ ಹೇಳಿದರು. ಆದರೆ ಏನು ಸ್ವಚ್ಛಗೊಳಿಸಿದರು? ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಮನಗರದಿಂದ ತಮ್ಮ ಪಕ್ಷವನ್ನು ಸ್ವಚ್ಛಗೊಳಿಸಿದರು. ರಾಮನಗರದಲ್ಲಿ ಬಿಜೆಪಿಯ ಚುನಾವಣಾ ಸೋಲನ್ನು ಉಲ್ಲೇಖಿಸಿ ಡಿಕೆ ಶಿವಕುಮಾರ್ ಟಾಂಗ್ ನೀಡಿದರು.

ಅಶ್ವಥ್ ನಾರಾಯಣ್ ಇನ್ನೂ ಆ ಟೆನ್ಷನ್ ನಲ್ಲಿದ್ದಾರೆ. ಬೆಂಗಳೂರು ನಗರದಲ್ಲಿ ಅವರು ಏನು ಮಾಡಿದ್ದಾರೆ ಎಂದು ನಾವು ಇನ್ನೂ ನೋಡಿಲ್ಲ. ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರು ಯಾವ ಕೆಲಸ ಮಾಡಿದ್ದಾರೆ ಮತ್ತು ನನ್ನ ವಿರುದ್ಧ ಯಾರನ್ನು ಎತ್ತಿ ಕಟ್ಟಿದ್ದಾರೆ ಎಂಬ ಬಗ್ಗೆ ವಿವರವಾಗಿ ವಿವರಿಸುತ್ತೇನೆ ಎಂದರು.

ನಿಜವಾದ ಗುತ್ತಿಗೆದಾರರಿಗೆ ಸಹಾಯ ಮಾಡಲು ನಾವು ತನಿಖೆ ಪ್ರಾರಂಭಿಸಿದ್ದೇವೆ. ಏನೇ ಆದರೂ ತನಿಖೆ ನಡೆಸಲು ನಿರ್ಧರಿಸಿದ್ದೇವೆ. ಅವರು ಯಾವುದೇ ಹಂತಕ್ಕೆ ಹೋಗಲಿ, ಯಾರನ್ನಾದರೂ ಭೇಟಿ ಮಾಡಲಿ, ಅವರು ಯಾವುದೇ ಆಟ ಆಡಲಿ ಅಥವಾ ಅಪಪ್ರಚಾರ ನಡೆಸಲಿ, ನಾನು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ , ಸ್ವಾತಂತ್ರ್ಯ ದಿನದ ನಂತರ ಮಾತನಾಡುತ್ತೇನೆ. ನಾನು ಯಾರಿಗೂ ಗುತ್ತಿಗೆ ನೀಡಿಲ್ಲ, ಕೆಲವರು ನನ್ನ ಬಳಿ ಬಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಬಿಲ್ ಬಿಡುಗಡೆ ಮಾಡುವಂತೆ ಕೇಳಿಕೊಂಡರು. ಕೆಲಸ ಮುಗಿದರೆ ಬಿಲ್‌ಗಳನ್ನು ತೆರವುಗೊಳಿಸಲು ನಾವು ಬದ್ಧರಾಗಿದ್ದೇವೆ. ಬಿಜೆಪಿ ಅಧಿಕಾರಾವಧಿಯಲ್ಲಿ ಬಿಲ್‌ಗಳನ್ನು ಏಕೆ ತೆರವುಗೊಳಿಸಲಿಲ್ಲ? ಎಂದು ಪ್ರಶ್ನಿಸಿದ ಶಿವಕುಮಾರ್‌, ಎರಡು ದಿನಗಳ ನಂತರ ದಾಖಲೆ ತೋರಿಸುತ್ತೇನೆ, ಆಗ ನಿಮಗೆ ಆಘಾತವಾಗುತ್ತದೆ. ಗುತ್ತಿಗೆದಾರರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ನನಗೆ ವಿಷಾದವಿದೆ ಎಂದರು.

ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ,  ರವಿ ಅವರಿಗೂ ಚಿಕಿತ್ಸೆ ಬೇಕು, ಒಳ್ಳೆಯ ಚಿಕಿತ್ಸೆ ಕೊಡಿಸೋಣ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ನವರಂಗಿ ನಾರಾಯಣ್ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅಶ್ವತ್ಥ ನಾರಾಯಣ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು ಆದರೆ ಈಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದ ವಿರುದ್ಧ ಆರೋಪಗಳ ಮೂಟೆಯೇ ಇದೆ. ಡಿಕೆಶಿ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆಗೆ ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ ಎಂದು ನಾರಾಯಣ್ ಹೇಳಿದರು.

ಪ್ರತಿ ಯೋಜನೆಗೆ ಡಿಕೆಎಸ್ ತೆರಿಗೆ ಮತ್ತು ವೈಎಸ್‌ಟಿ ವಿಧಿಸಲಾಗಿದೆ. ಶಿವಕುಮಾರ್ ವಿರುದ್ಧ 15 ಪರ್ಸೆಂಟ್ ಕಮಿಷನ್ ಆರೋಪವನ್ನು 'ಡಿಕೆಎಸ್ ತೆರಿಗೆ' ಎಂದು ಉಲ್ಲೇಖಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ವರ್ಗಾವಣೆಯಲ್ಲಿ ಕಿಕ್‌ಬ್ಯಾಕ್ ಆರೋಪಗಳನ್ನು 'ವೈಎಸ್‌ಟಿ' ಎಂದು ಉಲ್ಲೇಖಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT