ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಲೋಕಸಭಾ ಚುನಾವಣೆ: ಅನ್ಯ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಒಲವು- ಡಿಸಿಎಂ ಡಿಕೆ ಶಿವಕುಮಾರ್

2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರ್ಬಲವಾಗಿರುವ ಕಡೆ ಪಕ್ಷವನ್ನು ಬಲಪಡಿಸಬೇಕು, ಲೋಕಸಭೆ ಚುನಾವಣೆಗೆ ಆದ್ಯತೆ ನೀಡಲಾಗಿದ್ದು, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಯಾರನ್ನೂ ಸೇರಿಸಿಕೊಳ್ಳಬೇಕು ಎನ್ನುವುದನ್ನು ಸ್ಥಳೀಯ ಮುಖಂಡರಿಗೆ ಬಿಟ್ಟಿದ್ದು, ಪಕ್ಷದ ಮತದಾರರ ಪ್ರಮಾಣ ಹೆಚ್ಚಿಸಲು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸ್ಥಳೀಯ ಮುಖಂಡರಿಗೆ ಸೂಚಿಸಲಾಗಿದೆ ಎಂದರು. 

ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದ್ದು, ಈಗಾಗಲೇ ತಯಾರಿ ಆರಂಭಿಸಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ನಗರದ ಎಲ್ಲಾ ಮೂರು ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆದ್ದಿರುವುದರಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಕಾಂಗ್ರೆಸ್ ತಂತ್ರದ ಪ್ರಮುಖ ಭಾಗವಾಗಿದೆ.

ಪಕ್ಷ ಬಿಟ್ಟು ಹೋಗಿರುವವರು ಮರಳಿ ಬಂದಿರುವ ಉದಾಹರಣೆ ಸಾಕಷ್ಟಿದೆ. ಹೀಗಾಗಿ ತಪ್ಪು ಮಾಡಿರುವುದನ್ನು ಸರಿ ಮಾಡಿಕೊಳ್ಳುವುದಾದರೆ ಪಕ್ಷಕ್ಕೆ ಮತ್ತೆ ಬರಬಹುದು. ಆದರೆ, ಅವರಿಗೆ ಮೊದಲ ಸಿಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ಬಿಜೆಪಿಯಲ್ಲಿ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಕೆಲವು ಶಾಸಕರು ಕಾಂಗ್ರೆಸ್ ಗೆ ಬರಬಹುದು, ಬಿಜೆಪಿಯಿಂದ ಬರುವ ಶಾಸಕರನ್ನು ಸೇರಿಸಿಕೊಳ್ಳುತ್ತೇವೆ. ಪರಿಶೀಲನೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುತೇವೆಂದು ಅಧ್ಯಕ್ಷ ರು ಕೂಡಾ ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ಸಿದ್ಧಾಂತ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬರುವುದಾದರೆ ಬರಬಹುದು ಎಂದರು.

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯಾರೇ ಪಕ್ಷಕ್ಕೆ ಸೇರ್ಪಡೆಗೊಂಡರೂ ಸ್ವಾಗತಿಸುತ್ತೇನೆ, ಆದರೆ ಲೋಕಸಭೆಯ ಕಲಾಪ ಮತ್ತು ತಮ್ಮ ಲೋಕಸಭಾ ಕ್ಷೇತ್ರದ ಕೆಲಸಗಳಲ್ಲಿ ನಿರತರಾಗಿದ್ದರಿಂದ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಬೇರೆ ಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರಿಸುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನಿಂದ ಎಸ್‌ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಮತ್ತು ಜನತಾ ದಳ (ಜಾತ್ಯತೀತ) ಕೆ ಗೋಪಾಲಯ್ಯ ಸೇರಿದಂತೆ 17 ಶಾಸಕರು 2019ರಲ್ಲಿ ಬಿಜೆಪಿ ಸೇರಿ ರಾಜ್ಯದಲ್ಲಿ ಸರ್ಕಾರ ರಚಿಸಲು ಸಹಾಯ ಮಾಡಿದ್ದರು. ಆ ವರ್ಷ ನಡೆದ ಉಪಚುನಾವಣೆಯಲ್ಲಿ ಅವರನ್ನು ಬಿಜೆಪಿ ಟಿಕೆಟ್‌ನಲ್ಲಿ ಮರು ಆಯ್ಕೆ ಮಾಡಲಾಗಿತ್ತು ಮತ್ತು ಅವರಲ್ಲಿ ಅನೇಕರನ್ನು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಮಾಡಲಾಗಿತ್ತು.  ಈ ಮಧ್ಯೆ  ಬೇಕಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ, ಆದರೆ ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT