ಸಂಗ್ರಹ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆಯತ್ತ ಗಮನಹರಿಸಿ, ಮನೆ-ಮನೆಗೂ ಗ್ಯಾರಂಟಿ ಯೋಜನೆಗಳ ತಲುಪಿಸಿ: ಸರಣಿ ಸಭೆಗಳಲ್ಲಿ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನಹರಿಸಿ, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಮನೆ-ಮನೆಗೂ ತಲುಪಿಸಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನಹರಿಸಿ, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಮನೆ-ಮನೆಗೂ ತಲುಪಿಸಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ 31 ಸರಣಿ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 50 ಗಂಟೆಗಳ ಕಾಲ ಕಾಂಗ್ರೆಸ್ ಶಾಕರ ಸಮಸ್ಯೆಗಳನ್ನು ಆಲಿಸಿದರು. 5 ದಿನಗಳ ಕಾಲ ನಡೆದ ಸರಣಿ ಸಭೆಯಲ್ಲಿ ಶಾಸಕರು ಹಾಗೂ ಸಂಸದರು ಭಾಗವಹಿಸಿದ್ದರು.

ಸಭೆಯಲ್ಲಿ ಶಾಸಕರು ಮುಖ್ಯಮಂತ್ರಿಗಳಿಗೆ ಹಲವು ಸಲಹೆಗಳನ್ನು ನೀಡಿದರು. ಹಲವು ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕೈಗೆತ್ತಿಕೊಳ್ಳುವಂತೆ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಈ ವೇಳೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಲೋಕಸಭಾ ಚನಾವಣೆಯನ್ನು  ಗಮನದಲ್ಲಿಟ್ಟುಕೊಂಡು ಆದ್ಯತೆ ಮತ್ತು ಲಭ್ಯತೆಯ ಆಧಾರದ ಮೇಲೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮತ್ತು ಕುಂದುಕೊರತೆಗಳನ್ನು ಪರಿಹರಿಸಿ. ನಿಗದಿತ ಸಮಯಕ್ಕೆ ಅನುಗುಣವಾಗಿ ಕಾಮಗಾರಿಗಳ ಕೈಗೊಳ್ಳುವಂತೆ ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಭಿಪ್ರಾಯಗಳನ್ನು ತೆಗೆದುಕೊಳ್ಳಲಾಯಿತು. ಈ ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶಿವಕುಮಾರ್ ತಮ್ಮ ಸಲಹೆಗಳನ್ನು ನೀಡುತ್ತಲೇ ಇದ್ದರು.

ಐದು ಭರವಸೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದ್ದು, ಮಧ್ಯಮ ವರ್ಗ ಮತ್ತು ಬಡ ವರ್ಗದವರ ಮನೆ ಬಾಗಿಲಿಗೆ ಕೊಂಡೊಯ್ಯಬೇಕು. ಚುನಾವಣೆಗೆ ಆದ್ಯತೆ ನೀಡಲಾಗಿದ್ದು, ಮುಂಬರುವ ಬಿಬಿಎಂಪಿ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತಮ ಜಯ ತಂದುಕೊಡುವಂತೆ ಶಾಸಕರು ಭರವಸೆ ನೀಡಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿರುವ ಪಕ್ಷದ ಕಚೇರಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸೂಚನೆ ನೀಡದರು.

ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡವು ಜಿಲ್ಲಾವಾರು ಪ್ರತ್ಯೇಕ ಬೇಡಿಕೆಗಳು ಮತ್ತು ಪ್ರಗತಿ ಪಟ್ಟಿಗಳನ್ನು ಸಿದ್ಧಪಡಿಸಿ ಸಂಬಂಧಪಟ್ಟ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಲ್ಲಿಸಲಿದೆ.

ಈ ನಡುವೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳ ಪಟ್ಟಿಯನ್ನು ತಂಡವೊಂದು ಸಿದ್ಧಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್