ರಾಜಕೀಯ

ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ; ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?

Shilpa D

ಹುಬ್ಬಳ್ಳಿ: ಬಿಜೆಪಿಗೆ ಸೇರಿರುವ ಕಾಂಗ್ರೆಸ್ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂಬುದು ಮಾಧ್ಯಮಗಳ ಊಹಾಪೋಹಗಳ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ''ನನಗೆ ತಿಳಿದ ಮಟ್ಟಿಗೆ ಎಲ್ಲಾ ಶಾಸಕರು, ಮಾಜಿ ಶಾಸಕರು ಬಿಜೆಪಿಯಲ್ಲೇ ಇದ್ದಾರೆ ಮತ್ತು ಪಕ್ಷದಲ್ಲೇ ಮುಂದುವರಿಯುತ್ತಾರೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಅವರೊಂದಿಗೆ ಮಾತನಾಡಿದ್ದೇನೆ. ಮಾಧ್ಯಮಗಳಲ್ಲಿ ವದಂತಿಗಳು ಹರಿದಾಡುತ್ತಿವೆ ಮತ್ತು ಅಂತಹ ಯಾವುದೇ ಬೆಳವಣಿಗೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ, ಆದರೆ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರದೆ ಪಕ್ಷದ ಪರವಾಗಿ ನಿಲ್ಲುತ್ತಾರೆ ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ನೀಡಿರುವ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ  ಮತ್ತಷ್ಟು ಊಹಾಪೋಹಕ್ಕೆ ಕಾರಣವಾಗಿದೆ.

ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?' ರಾಮಲಿಂಗಾರೆಡ್ಡಿ ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಈ ತರಹದ ಊಹಾಪೋಹಗಳು ಬೇಡಾ ಎಂದರು. ಇನ್ನು ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆದೆ ಎಂದರು‌.

ಕೃಷಿ ಸಚಿವ ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರ ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ. ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ ಬಂದಿವೆ, ಅವರು ರಾಜಿನಾಮೆ ಕೊಡಬೇಕು. ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರಾಥಮಿಕವಾಗಿ ಕಾಣುವಂತೆ ಸತ್ಯ ಎನ್ನುಬಹುದಾದ ಆರೋಪಗಳು ಕೇಳಿ ಬಂದಿವೆ.

ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಬಿಜೆಪಿ ಪ್ರಸ್ತುತತೆ ಎಲ್ಲರಿಗೂ ಗೊತ್ತಿದೆ. ಹೀಗಾಗಿ ಯಾರೂ ಬಿಜೆಪಿ ಬಿಟ್ಟು ಹೋಗಲ್ಲಾ ಕಾವೇರಿ ವಿಷಯ ಡೈವರ್ಟ್ ಮಾಡಲು ಪಕ್ಷಾಂತರ ವಿಚಾರ ಮುಂದೆ ತಂದಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗಿದೆ ಅಂತಾ ಕಾಂಗ್ರೆಸ್ ಪಾರ್ಟಿಯವರೇ ಹೇಳ್ತಿದ್ದಾರೆ ಕಾಂಗ್ರೆಸ್‌ಗೆ ನೇತ್ರತ್ವ ಮತ್ತು ನಿಯತ್ತಿಲ್ಲ.‌ಯಾವುದೇ ಕಾರಣಕ್ಕೂ ಹಿನ್ನಡೆ ಅಲ್ಲಾ. ಬಿಜೆಪಿ ಬಂಡೆಗಲ್ಲಂತೆ ಗಟ್ಟಿಯಾಗಿದೆ ಎಂದರು.

ದೂರು ಕೊಟ್ಟ ಗುತ್ತಿಗೆದಾರರನ್ನು ಮೊದಲು ಪೊಲೀಸ್ ಠಾಣೆಗೆ ಕರೆಸುತ್ತಿದ್ದಾರೆ. ಈಗ ಗುತ್ತಿಗೆದಾರರನ್ನು ಹೆದರಿಸಿಲ್ಲ ಬೆದರಿಸಿ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ. ಕಾವೇರಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರ ಕಾವೇರಿ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಂಡು ಹೇಳುವ ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿದರು.

SCROLL FOR NEXT