ಕಾಂಗ್ರೆಸ್ ಸೇರ್ತಾರಾ ಮುನೇನಕೊಪ್ಪ?: ನಾಳೆ ಸುದ್ದಿಗೋಷ್ಠಿ ಕರೆದ ಮಾಜಿ ಸಚಿವ
ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭಾನುವಾರ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ...
ಧಾರವಾಡ: ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭಾನುವಾರ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರು ಸೋಮವಾರ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಧಾರವಾಡ ಜಿಲ್ಲೆಯ ಬಿಜೆಪಿ ನಾಯಕಾರದ ಶಂಕರ್ ಪಾಟೀಲ್ ಮುನೇನಕೊಪ್ಪ ಮತ್ತು ಎಸ್‍ಐ ಚಿಕ್ಕನಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವರದಿಗಳ ನಡುವೆ, ಈ ಇಬ್ಬರು ನಾಯಕರು ನಮ್ಮ ಪಕ್ಷಕ್ಕೆ ಬಂದರೆ ಜಿಲ್ಲೆಯಲ್ಲಿ ಮತ್ತಷ್ಟು ಬಲ ಬರಲಿದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಇದನ್ನು ಓದಿ: ಹಿಡಿದಿಟ್ಟುಕೊಳ್ಳುವ ಬಿಜೆಪಿ ಪ್ರಯತ್ನಕ್ಕೆ ಸೆಡ್ಡು: ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಶಿವರಾಮ ಹೆಬ್ಬಾರ್, ರೇಣುಕಾಚಾರ್ಯ
ಮುನೇನಕೊಪ್ಪ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಎನ್ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.