ಡಿಕೆ.ಶಿವಕುಮಾರ್ 
ರಾಜಕೀಯ

ಸೇಡಿನ ರಾಜಕಾರಣ ಬಯಸುತ್ತಿಲ್ಲ, ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶ: ಡಿ.ಕೆ.ಶಿವಕುಮಾರ್

ಸೇಡಿನ ರಾಜಕಾರಣ ಮಾಡುವುದು ನಮಗಿಷ್ಟವಿಲ್ಲ. ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ ಎಂಡು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಸೇಡಿನ ರಾಜಕಾರಣ ಮಾಡುವುದು ನಮಗಿಷ್ಟವಿಲ್ಲ. ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ ಎಂಡು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಆಳ್ವಿಕೆಯಲ್ಲಿ ನಡೆದ ಕೋವಿಡ್ ಅಕ್ರಮಗಳ ಕುರಿತುಸರ್ಕಾರ ತನಿಖೆಗೆ ಆದೇಶಿಸಿರುವ ಕುರಿತು ಉಪ ಮುಖ್ಯಮಂತ್ರಿಗಳು ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಸೇಡಿನ ರಾಜಕಾರಣವನ್ನು ನಾವು ಬಯಸುತ್ತಿಲ್ಲ. ನಮಗೆ ನ್ಯಾಯ ಸಿಗಬೇಕಷ್ಚೇ. ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಸಚಿವರು ಕೇವಲ 3 ಜನರಷ್ಟೇ ಸಾವನ್ನಪ್ಪಿದ್ದರು ಎಂದು ಹೇಳಿದ್ದರು. ಘಟನೆ ಸಂಬಂಧ ಒಬ್ಬ ಸಿಬ್ಬಂದಿಯನ್ನೂ ಕೂಡ ಅಮಾನತುಗೊಳಿಸಿಲ್ಲ. ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ. ಇದನ್ನು ತನಿಖೆ ಮಾಡಬಾರದೇ? ಎಂದು ಪ್ರಶ್ನಿಸಿದರು.

ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹಣವನ್ನು ಬಳಕೆ ಮಾಡಲಾಗಿದೆ. ಆದರೆ, ಬಳಕೆ ಮಾಡಿರುವ ಹಣಕ್ಕೂ, ಸರ್ಕಾರ ನೀಡಿರುವ ಲೆಕ್ಕಕ್ಕೂ ದೊಡ್ಡ ವ್ಯತ್ಯಾಸಗಳು ಕಂಡು ಬಂದಿದೆ. ಈ ವ್ಯತ್ಯಾಸ ಶೇ.10-20ರಷ್ಟಿಲ್ಲ. ಶೇ.100ಕ್ಕಿಂತ ಹೆಚ್ಚಾಗಿದೆ. ಸರ್ಕಾರ ಇದನ್ನೆಲ್ಲಾ ಪರಿಶೀಲನೆ ನಡೆಸುವುದು ಅಗತ್ಯವಿದೆ. ಕಾಮಗಾರಿ ಕಾರ್ಯಗಳ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಗುತ್ತಿಗದಾರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇವೆಲ್ಲದರ ಕುರಿತು ನಾವು ತನಿಖೆ ನಡೆಸಬೇಕು. ರಾಜ್ಯ ಜನತೆಗೆ ನ್ಯಾಯ ಕೊಡಿಸಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT