ಡಿ.ಕೆ ಶಿವಕುಮಾರ್ 
ರಾಜಕೀಯ

ಲೋಕಸಭೆ ಚುನಾವಣೆ ಹಿನ್ನೆಲೆ: ಸೆಪ್ಟಂಬರ್ ನಲ್ಲಿ ಕೆಪಿಸಿಸಿ ಪುನಾರಚನೆ; ಸಚಿವರು, ಶಾಸಕರಿಗೆ ಕೊಕ್?

ಸಿದ್ದರಾಮಯ್ಯ ಸಂಪುಟದ ಭಾಗವಾಗದ ನಾಯಕರಿಗೆ ಪಕ್ಷದ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿ ನೀಡಿ ಪಕ್ಷ ಕಟ್ಟುವ ಚಟುವಟಿಕೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಡುವ ಸಾಧ್ಯತೆಯಿದೆ,

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಮುನ್ನ, ರಾಜ್ಯಾದ್ಯಂತ ತನ್ನ ನೆಲೆಯನ್ನು ಬಲಪಡಿಸಲು ಕಾಂಗ್ರೆಸ್ ಹಲವು ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸೆಪ್ಟೆಂಬರ್‌ನಲ್ಲಿ ಪುನಾರಚನೆಯಾಗುವ ನಿರೀಕ್ಷೆಯಿದೆ.

ಸಿದ್ದರಾಮಯ್ಯ ಸಂಪುಟದ ಭಾಗವಾಗದ ನಾಯಕರಿಗೆ ಪಕ್ಷದ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿ ನೀಡಿ ಪಕ್ಷ ಕಟ್ಟುವ ಚಟುವಟಿಕೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಡುವ ಸಾಧ್ಯತೆಯಿದೆ. ಕೆಪಿಸಿಸಿ ಪದಾಧಿಕಾರಿಗಳಾಗಿರುವ ಅನೇಕರು ಸಚಿವರಾಗಿದ್ದಾರೆ. ಅವರನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕಿದೆ. ಹೊಸಬರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಪುನಾರಚನೆ ಮಾಡಲಾಗುತ್ತಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚೆಗಷ್ಟೇ 100 ದಿನಗಳನ್ನು ಪೂರೈಸಿದ್ದು, ಗ್ಯಾರಂಟಿಗಳ ಅನುಷ್ಠಾನದಲ್ಲಿ ನಿರತವಾಗಿದೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಯೋಜನೆಗಳ ಯಶಸ್ಸನ್ನು ಜನರ ಬಳಿಗೆ ಕೊಂಡೊಯ್ಯಲು ಬಯಸಿದೆ. ಸದ್ಯ ಹಲವು ಕೆಪಿಸಿಸಿ ಪದಾಧಿಕಾರಿಗಳು ಈಗ ಶಾಸಕರಾಗಿದ್ದಾರೆ ಮತ್ತು ಕೆಲವು ಸಚಿವರು ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಸಚಿವರು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಿರುವುದರಿಂದ ಪಕ್ಷದ ಹೆಚ್ಚುವರಿ ಕೆಲಸದ ಹೊರೆಯಾಗಲಿದೆ.  ಇದರ ಜೊತೆಗೆ ನಮಗೆ ಪಕ್ಷದ ಮೇಲೆ ಹೆಚ್ಚು ಗಮನ ಹರಿಸುವ ನಾಯಕರು ಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ ಪ್ರೆಸ್ ಗೆ ತಿಳಿಸಿದರು.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಹೊರತಾಗಿ ಬಿಬಿಎಂಪಿ ಮತ್ತು ಪಂಚಾಯತ್‌ಗಳ ಚುನಾವಣೆಗಳೂ ನಡೆಯಲಿವೆ. “ಪಕ್ಷ ಕಟ್ಟುವ ಚಟುವಟಿಕೆಗಳ ಮೇಲೆ ಮಾತ್ರ ಗಮನಹರಿಸಬಲ್ಲ ವ್ಯಕ್ತಿಗಳು ನಮಗೆ ಬೇಕು. ಮಂತ್ರಿಗಳು ಅದನ್ನು ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ಮೊದಲ ವಾರದೊಳಗೆ ಕೆಪಿಸಿಸಿ ಪುನಾರಚನೆ ನಡೆಯಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲೊಬ್ಬರಾದ ಸಲೀಂ ಅಹ್ಮದ್ ಹೇಳಿದ್ದಾರೆ. ಕೆಪಿಸಿಸಿಯಲ್ಲಿ 5 ಜನ ಕಾರ್ಯಾಧ್ಯಕ್ಷರು ಮುಂದುವರೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಕಾರ್ಯಾಧ್ಯಕ್ಷರಾಗಿರುವ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಮತ್ತು ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

ಇದರ ಹೊರತಾಗಿ, ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ನಿರ್ಣಾಯಕವಾಗಿರುವ ಕೆಪಿಸಿಸಿ ಪ್ರಚಾರ ಮತ್ತು ಪ್ರಣಾಳಿಕೆ ಸಮಿತಿಗಳ ಮುಖ್ಯಸ್ಥ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಶೀಘ್ರದಲ್ಲೇ ಸಭೆ ಸೇರಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಶಿವಕುಮಾರ್ ಮುಂದಿನ ಒಂದು ವರ್ಷವಾದರೂ ಕೆಪಿಸಿಸಿ ಅಧ್ಯಕ್ಷರಾಗಿ ಇರಲಿದ್ದಾರೆ ಎಂದು ವರಿಷ್ಠರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT