ಸುನೀಲ್ ಕನುಗೋಳು 
ರಾಜಕೀಯ

ಕರ್ನಾಟಕದಂತೆ ಮಧ್ಯಪ್ರದೇಶ, ತೆಲಂಗಾಣದಲ್ಲೂ ಮ್ಯಾಜಿಕ್ ಮಾಡ್ತಾರಾ ಸುನೀಲ್ ಕನುಗೋಳು?

ತೆಲಂಗಾಣ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದು ಡಿಸೆಂಬರ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ಅವರ ತಂತ್ರಗಾರಿಕೆ ಮ್ಯಾಜಿಕ್ ಮಾಡಲಿದ್ಯಾ ಎಂಬುದನ್ನು ನೋಡಲು  ಡಿಸೆಂಬರ್ 3ರವರೆಗೂ ಕಾಯಬೇಕಾಗಿದೆ.

ಬೆಂಗಳೂರು: ತೆಲಂಗಾಣ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದು ಡಿಸೆಂಬರ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ಅವರ ತಂತ್ರಗಾರಿಕೆ ಮ್ಯಾಜಿಕ್ ಮಾಡಲಿದ್ಯಾ ಎಂಬುದನ್ನು ನೋಡಲು  ಡಿಸೆಂಬರ್ 3ರವರೆಗೂ ಕಾಯಬೇಕಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 224 ರಲ್ಲಿ 135 ಸ್ಥಾನಗಳೊಂದಿಗೆ ಭಾರೀ ಬಹುಮತ ಗಳಿಸಲು ತಂತ್ರ ಹೆಣೆದಿದ್ದರು. ಕರ್ನಾಟಕದಲ್ಲಿ ಮೇ.10 ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ರಚಿಸಿದ ನಂತರ, ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಮುಂಚಿತವಾಗಿ ಸೇರ್ಪಡೆಗೊಂಡಿದ್ದ ಕನುಗೋಳು ಅವರಿಗೆ ಸಂಪುಟ ದರ್ಜೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರ ಹುದ್ದೆಯನ್ನು ನೀಡಲಾಯಿತು.

ಕರ್ನಾಟಕದ ಶಕ್ತಿಕೇಂದ್ರ ‘ವಿಧಾನಸೌಧ’ದ ಮೂರನೇ ಮಹಡಿಯಲ್ಲಿ ಸಿಎಂಒ ಕಚೇರಿಯ ಅದೇ ಸಾಲಿನಲ್ಲಿ ಅವರಿಗೆ ಕಚೇರಿಯನ್ನೂ ಮಂಜೂರು ಮಾಡಲಾಗಿದೆ. ಸ್ಪಷ್ಟವಾಗಿ, ಇದು ಅವರ ತಂತ್ರಗಾರಿಕೆಗೆ ನೀಡಿದ  ಮನ್ನಣೆಯಾಗಿದೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯ ಕಾರ್ಯವನ್ನು ಅವರಿಗೆ ನೀಡಿದ್ದರಿಂದ ಅವರು ವಿಧಾನಸೌಧದ ಕಾರಿಡಾರ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಕರ್ನಾಟಕವು ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಐದು ಭರವಸೆ ನೀಡಿತು, ಈ ಖಾತರಿಗಳು ಚುನಾವಣೆಯಲ್ಲಿ ಪರಿಣಾಮ ಬೀರಿದವು.

ಕರ್ನಾಟಕದಲ್ಲಿ JD(S) ಅನ್ನು ಕೇಸರಿ ಪಕ್ಷದ 'B' ಟೀಮ್ ಎಂದು ಬ್ರಾಂಡ್  ಮಾಡಿದಂತೆ, ಕೆ.ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಬಿಜೆಪಿಯೊಂದಿಗೆ ನಿಗೂಢ ಮೈತ್ರಿ ಮಾಡಿಕೊಂಡಿದೆ ಎಂದು ಬ್ರಾಂಡ್ ಮಾಡುವ ಮೂಲಕ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಧ್ರುವೀಕರಿಸುವ ಮೂಲಕ ಕನುಗೋಳು ಸಲಹೆ ನೀಡಿದ್ದಾರೆ.

ಕರ್ನಾಟಕದಂತೆ ವಾರ್ ರೂಂಗಳನ್ನು ಸ್ಥಾಪಿಸಿ ಆಕ್ರಮಣಕಾರಿಯಾಗಿ ಕೆಲಸ ಮಾಡಿರುವ  ಕನುಗೋಳು ಅವರು ಮಧ್ಯಪ್ರದೇಶದಲ್ಲಿ 230 ರಲ್ಲಿ 125 ಮತ್ತು ತೆಲಂಗಾಣದಲ್ಲಿ 119 ರಲ್ಲಿ 67 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಅಂದರೆ ಸರಳ ಬಹುಮತ ತರುವ ಭವಿಷ್ಯ ನುಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT