ಮಧು ಬಂಗಾರಪ್ಪ 
ರಾಜಕೀಯ

ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಎಂದು ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT