ಸುಮಲತಾ, ಪುಟ್ಟರಾಜು ಮತ್ತು ಶಾಂಭವಿ 
ರಾಜಕೀಯ

ಮಂಡ್ಯದಿಂದ ಸ್ಪರ್ಧಿಸಲು ಪುಟ್ಟರಾಜುಗೆ ಗ್ರೀನ್ ಸಿಗ್ನಲ್! ಕಾಂಗ್ರೆಸ್ ನಿಂದ ಎಸ್ಎಂಕೆ ಪುತ್ರಿ ಶಾಂಭವಿ ಕಣಕ್ಕೆ? ಸುಮಲತಾ ಭವಿಷ್ಯ ಅತಂತ್ರ!

ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ ಹಾಲಿ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯವು ಅಪಾಯದಲ್ಲಿದೆ.

ಬೆಂಗಳೂರು:  ಮುಂದಿನ ವರ್ಷದ ಆದಿಯಲ್ಲಿ ನಡೆಯಲ್ಲಿರುವ ಲೋಕಸಭಾ ಚುನಾವಣೆಗೆ ಈಗಿಂದಲೇ ಕಾವೇರುತ್ತಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಈಗಾಗಲೇ ಲೋಕ ಸಮರಕ್ಕೆ ಭರ್ಜರಿ ತಯಾರಿ ಮಾಡುತ್ತಿದೆ. ಹೇಗಾದರೂ ಮಾಡಿ ಸಕ್ಕರಿನಗರಿಯನ್ನ ಕಬ್ಜ ಮಾಡಬೇಕು ಎಂಬ ಪ್ಯ್ಲಾನ್ ನಲ್ಲಿ ಇರುವ ಕೈ ಪಡೆ, ಈಗಾಗಲೇ ಚುನಾವಣೆಗೆ ತಯಾರಿ ನಡೆಸುತ್ತಿದೆ. ಇದರ ಜೊತೆಗೆ ಜೆಡಿಎಸ್- ಬಿಜೆಪಿ ಮೈತ್ರಿ ಕೂಟ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಬೇಕೆಂದು ರಣತಂತ್ರ ರೂಪಿಸುತ್ತಿವೆ.

ಬಿಜೆಪಿ-ಜೆಡಿಎಸ್ ಮೈತ್ರಿಯ ಭಾಗವಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ ಹಾಲಿ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯವು ಅಪಾಯದಲ್ಲಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷೇತರರಾಗಿ ಸ್ಪರ್ಧಿಸಿದ್ದ ಸುಮಲತಾ ಸೋಲಿಸಿದರು, ಈ ವೇಳೆ ಅವರಿಗೆ ಬಿಜೆಪಿ ಬೆಂಬಲ ನೀಡಿತು  ಜೊತೆಗೆ ಸಚಿವ ಎನ್ ಚಲುವರಾಯಸ್ವಾಮಿ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ ಸಪೋರ್ಟ್ ಮಾಡಿದ್ದರು, ಅಂತಿಮವಾಗಿ ಸುಮಲತಾ ಗೆಲ್ಲಲು ಸಹಾಯ ಮಾಡಿತು.

ತಮ್ಮ ಪತಿ ದಿವಂಗತ ಅಂಬರೀಶ್‌ ಅವರು ಸ್ಪರ್ಧಿಸಿದ್ದ ಮಂಡ್ಯ ಕ್ಷೇತ್ರವನ್ನು ತಾನು ಎಂದಿಗೂ ಬಿಟ್ಟುಕೊಡುವುದಿಲ್ಲ ಎಂದು ಸುಮಲತಾ ಹೇಳುತ್ತಿದ್ದರೂ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಅವರಿಗೆ ನೀಡುವ ಮೂಲಕ ಅವರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಿಜೆಪಿಯೊಳಗೆ ಒಕ್ಕಲಿಗ ನಾಯಕರು ಇದಕ್ಕೆ ಅಪಸ್ವರ ಎತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕ್ಷೇತ್ರ ಗೆಲ್ಲುವ ಬಗ್ಗೆ ವಿಶ್ವಾಸ ಹೊಂದಿದ್ದು ಮಾಜಿ ಸಚಿವ ಸಿಎಸ್ ಪುಟ್ಟರಾಜು ಅವರಿಗೆ ಕೆಲಸ ಆರಂಭಿಸುವಂತೆ ಮೌಖಿಕ ಸೂಚನೆ ನೀಡಿದ್ದಾರೆ. 2014ರಲ್ಲಿ ನಟಿ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನಾ ಅವರನ್ನು ಪುಟ್ಟರಾಜು ಸೋಲಿಸಿದ್ದರು.

ಆಪರೇಷನ್‌ ಹಸ್ತ’ದ ಮೂಲಕ ಪುಟ್ಟರಾಜು ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ವಿಫಲ ಪ್ರಯತ್ನ ನಡೆಸಿತ್ತು. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಜೆಡಿಎಸ್ ನಾಯಕರು ಭರವಸೆ ನೀಡಿದ್ದರಿಂದ ಪುಟ್ಟರಾಜು ಕಾಂಗ್ರೆಸ್ ಸೇರಲು ಹಿಂದೆ ಸರಿದಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ಹೋರಾಡಲು ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ, ಹೀಗಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಪತ್ನಿ ಧನಲಕ್ಷ್ಮಿ ಅವರನ್ನು ಕಣಕ್ಕಿಳಿಸುವುದು ಸೇರಿದಂತೆ ಹಲವು ಆಯ್ಕೆಗಳನ್ನು ಕಾಂಗ್ರೆಸ್ ಹೊಂದಿದೆ. ಇತ್ತೀಚೆಗೆ ಚಲುವರಾಯಸ್ವಾಮಿ  ದಂಪತಿಗಳು ಒಟ್ಟಿಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪುತ್ರಿ ಶಾಂಭವಿ, ರಮ್ಯಾ ಹೆಸರುಗಳೂ ಹರಿದಾಡುತ್ತಿವೆ. ಮಂಡ್ಯ ಶಾಸಕ ರವಿ ಗಣಿಗ ಅವರು ಶಾಂಭವಿ ಅಥವಾ ಧನಲಕ್ಷ್ಮಿ ಅವರನ್ನು ಕಣಕ್ಕಿಳಿಸುವುದು ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT