ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ರಾಜ್ಯಾಧ್ಯಕ್ಷ ಬದಲಾಗೋವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ!

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿಲ್ಲ. ದಕ್ಷಿಣ ಕರ್ನಾಟಕದವರ ಗುಲಾಮರು ನಾವಲ್ಲ ಎಂದು ಬಿಜೆಪಿ‌ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್​ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು.

ಬಹಳಷ್ಟು ಅನುಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದರು.

ನರೇಂದ್ರ ‌ಮೋದಿ ನಾಯಕತ್ವ ಇಡೀ ದೇಶದ ಜನರು ಒಪ್ಪಿಕೊಂಡಿದ್ದಾರೆ. ನರೇಂದ್ರ ‌ಮೋದಿ ದೇಶಕ್ಕೆ ಗ್ಯಾರಂಟಿ ಇರುವುದಿಂದ ಗೆಲುವುವಾಗಿದೆ. ಹೊಂದಾಣಿಕೆ ‌ಇಲ್ಲದ ರಾಜಕಾರಣ, ‌ಹಿಂದುತ್ವ ಅಭಿವೃದ್ಧಿ ಕಾರಣವಾಗಿದೆ ಎಂದರು. ಕುಟುಂಬ ರಾಜಕಾರಣ ಕಿತ್ತು ಹಾಕಬೇಕು. ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತದೆ. ವಂಶವಾದವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ. ಇನ್ನು ಮೇಲೆ ಬದಲಾವಣೆ ಆಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT