ರಾಜಕೀಯ

ತೆಲಂಗಾಣ ಕಾಂಗ್ರೆಸ್ ನಲ್ಲಿ ಡಿಕೆ ಪಾರುಪತ್ಯ: ವೈಎಸ್ಆರ್ ಪುತ್ರಿ ಮನವೊಲಿಸಿದ ಡಿಕೆಶಿ; ಆಂಧ್ರ ಚುನಾವಣೆ 'ಬಂಡೆ' ಹೆಗಲಿಗೆ?

ತೆಲಂಗಾಣ ಅಸೆಂಬ್ಲಿ ಚುನಾವಣಾ ಫಲಿತಾಂಶ: ತೆಲಂಗಾಣ ವಿಧಾನಸಭೆ ಚುನಾವಣೆ ಮುಗಿದಿದೆ. ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ ನಡುವಿನ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದಿದೆ. 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ 64 ಸ್ಥಾನ ಗಳಿಸಿದೆ.

ಬೆಂಗಳೂರು: ತೆಲಂಗಾಣ ಅಸೆಂಬ್ಲಿ ಚುನಾವಣಾ ಫಲಿತಾಂಶ: ತೆಲಂಗಾಣ ವಿಧಾನಸಭೆ ಚುನಾವಣೆ ಮುಗಿದಿದೆ. ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ ನಡುವಿನ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದಿದೆ. 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ 64 ಸ್ಥಾನ ಗಳಿಸಿದೆ.

ಕರ್ನಾಟಕ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಒಂದರ ಹಿಂದೊಂದು ಗೆಲುವಿನೊಂದಿಗೆ, ಎರಡೂ ರಾಜ್ಯಗಳಲ್ಲಿ ಪಕ್ಷದ ಗೆಲುವಿಗೆ ಕಾರಣವಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭವಿಷ್ಯದಲ್ಲಿ ಕರ್ನಾಟಕದಲ್ಲಿ ಉನ್ನತ ಹುದ್ದೆಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.

ತೆಲಂಗಾಣ ಕಾಂಗ್ರೆಸ್ ನಾಯಕರ ಅಸಮಾಧಾನವನ್ನು ಹೋಗಲಾಡಿಸುವಲ್ಲಿ ಡಿಕೆ ಶಿವಕುಮಾರ್ ಮಂತ್ರ ಚೆನ್ನಾಗಿ ಕೆಲಸ ಮಾಡಿದೆ. ಬೆಂಗಳೂರಿನಲ್ಲಿ ತೆಲಂಗಾಣ ಕಾಂಗ್ರೆಸ್ ರಾಜಿ ಪಂಚಾಯ್ತಿಯಲ್ಲಿ ಡಿ.ಕೆ. ಅಧಿಪತ್ಯ ಪ್ರಭಾವ ಬೀರಿದೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಿಂದ ಹಿಡಿದು ಫಲಿತಾಂಶದ ನಂತರ ಕಾಂಗ್ರೆಸ್ ಶಾಸಕರನ್ನು ಕುದುರೆ ವ್ಯಾಪಾರದಿಂದ ದೂರವಿಡುವವರೆಗೆ  ಶಿವಕುಮಾರ್ ಟ್ರಬಲ್‌ಶೂಟರ್ ಪಾತ್ರವನ್ನು ವಹಿಸಿದ್ದಾರೆ. ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಮತ್ತು ಪ್ರತಿಪಕ್ಷದ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಸೇರಿದಂತೆ ತೆಲಂಗಾಣ ನಾಯಕರ ನಡುವಿನ ಭಿನ್ನಾಭಿಪ್ರಾಯವನ್ನು ಹೋಗಲಾಡಿಸಲು ಸರಿಯಾದ ತಳಪಾಯ ನಿರ್ಮಿಸಿ ಭಿನ್ನಮತ ಬಗೆಹರಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೈದರಾಬಾದ್-ಕರ್ನಾಟಕ ಪ್ರದೇಶದ ಪ್ರಮುಖ ದಲಿತ ನಾಯಕರಾಗಿದ್ದಾರೆ. ಕರ್ನಾಟಕದಲ್ಲಿ ಎಸ್‌ಸಿ ಬಲ ಸಮುದಾಯದಂತೆ ತೆಲಂಗಾಣದಲ್ಲಿ 'ಮಾಲಾ' ಸಮುದಾಯವು ಕಾಂಗ್ರೆಸ್‌ನ ಬೆನ್ನಿಗೆ ಒಗ್ಗೂಡಿತು.

ಈ ಅಂಶಗಳನ್ನು ತಮ್ಮ ಅನುಕೂಲಕ್ಕೆ ತಿರುಗಿಸಿಕೊಂಡ ಶಿವಕುಮಾರ್ ಅವರು ಪಕ್ಷವನ್ನು ಒಗ್ಗೂಡಿಸಲು ಯಶಸ್ಸು ಸಾಧಿಸಿದರು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೆ, ಆಂಧ್ರಪ್ರದೇಶದ ಮಾಜಿ ಸಿಎಂ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಸ್ಪರ್ಧೆಯಿಂದ ಹೊರಗಿಡುವಂತೆ ಮನವೊಲಿಸುವಲ್ಲಿ ಅವರು ಯಶಸ್ವಿಯಾದರು.

ವೈ.ಎಸ್. ಶರ್ಮಿಳಾ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ಬಳಿಕವೇ ಈ ವಿಷಯ ಬಯಲಿಗೆ ಬಂದಿದೆ. ಆ ನಂತರ ವೈಎಸ್ ಶರ್ಮಿಳಾ ಅವರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರೂ ಕಾರಣಾಂತರಗಳಿಂದ ವಿಲೀನ ಕಾರ್ಯಗತವಾಗಲಿಲ್ಲ. ಶರ್ಮಿಳಾ ಅವರು ತೆಲಂಗಾಣದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದರು.. ಬಳಿಕ ಡಿಕೆ ಶಿವಕುಮಾರ್ ಅವರನ್ನು ಸಂಪರ್ಕಿಸಿದರು.. ಕೆಸಿಆರ್​​ ಸರ್ಕಾರದ ಆಡಳಿತ ವಿರೋಧಿ ಮತಗಳು ವಿಭಜನೆಯಾಗದಂತೆ, ಕಾಂಗ್ರೆಸ್ ಪಕ್ಷದೊಂದಿಗೆ ಸಹಕರಿಸುವಂತೆ ಮನವಿ ಮಾಡುವಲ್ಲಿ ಡಿಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದರು.  2024ರ ಏಪ್ರಿಲ್‌/ಮೇ ತಿಂಗಳಲ್ಲಿ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆವರೆಗೂ ಈ ನಿರ್ಧಾರವನ್ನು ತಡೆಹಿಡಿಯಲಾಗಿದೆ.

ಮೂಲಗಳ ಪ್ರಕಾರ, ಕಾಂಗ್ರೆಸ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಬಿಂಬಿಸುವ ಸಾಧ್ಯತೆಯಿದೆ, ಅಲ್ಲಿ ಅವರು ತಮ್ಮ ಸಹೋದರ ಮತ್ತು ಪ್ರಸ್ತುತ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರೊಂದಿಗೆ ಮುಖಾಮುಖಿಯಾಗಲಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿನ ಜವಾಬ್ದಾರಿಯನ್ನು ಶಿವಕುಮಾರ್ ಅವರಿಗೆ ವಹಿಸುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಡಿಸಿಎಂ ಡಿಕೆ ಶಿವಕುಮಾರ್ ಅವರ ಮಹಾತ್ವಾಕಾಂಕ್ಷೆಗೆ ಈ ಫಲಿತಾಂಶಗಳು ಮತ್ತಷ್ಟು ಬೆಂಬಲ ನೀಡಲಿವೆ,  ಸಿಎಂ ಆಗುವ ಅವಕಾಶದ ಮೇಲೆ ಪರಿಣಾಮ ಬೀರಲಿದೆ.

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿರುವ ಹಾಲಿ ಸಿಎಂ ಸಿದ್ದರಾಮಯ್ಯ ಅವರ ನಡುವೆ 'ರಾಜಿ ಅಧಿಕಾರ ಹಂಚಿಕೆ ಒಪ್ಪಂದ' ಮಾಡಿಕೊಂಡಿದೆ ಎಂದು ವರದಿಯಾಗಿದೆ. ಆದರೆ  ಒಂದು ವೇಳೆ ಸಿದ್ದರಾಮಯ್ಯ ಸಿಎಂ ಹುದ್ದೆ ತ್ಯಜಿಸಿದರೇ  ಗೃಹ ಸಚಿವ ಡಾ ಜಿ ಪರಮೇಶ್ವರ ಅವರಂತಹ ದಲಿತ ನಾಯಕರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ. ಇತ್ತೀಚೆಗೆ ಇವರಿಬ್ಬರು ಇತರ ಹಿರಿಯ ದಲಿತ ಮುಖಂಡರೊಂದಿಗೆ ಔತಣಕೂಟ ನಡೆಸುತ್ತಿರುವುದು ಈಗಾಗಲೇ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT