ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು 
ರಾಜಕೀಯ

ಪಕ್ಷ ಬದಲಾದಂತೆ 'ಹಿಂದೂ ಉಲಿ'ಯ ವೇಷವೂ ಬದಲಾಗುತ್ತದೆ! ಕಾಂಗ್ರೆಸ್ ಕಿಡಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಸ್ಲಿಂರೊಂದಿಗೆ ಹೊಂದಿರುವ ಸಂಬಂಧ, ವ್ಯವಹಾರದಲ್ಲಿನ ಪಾಲುದಾರಿಕೆ ಕುರಿತ ವಿವಿಧ ಫೋಟೋಗಳನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಕಿಡಿಕಾರುತ್ತಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಮುಸ್ಲಿಂ ಮೌಲ್ವಿ ತನ್ವಿರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಸ್ಲಿಂರೊಂದಿಗೆ ಹೊಂದಿರುವ ಸಂಬಂಧ, ವ್ಯವಹಾರದಲ್ಲಿನ ಪಾಲುದಾರಿಕೆ ಕುರಿತ ವಿವಿಧ ಫೋಟೋಗಳನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಕಿಡಿಕಾರುತ್ತಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶನಿವಾರ ಫೋಸ್ಟ್  ಹಂಚಿಕೊಂಡಿರುವ ಕಾಂಗ್ರೆಸ್, ರಾಜಕೀಯ ಪಕ್ಷ ಬದಲಾದಂತೆ ಹಿಂದೂ ಉಲಿಯ ವೇಷವೂ ಬದಲಾಗುತ್ತಿದೆ ಎಂದು ಟೀಕಿಸಿದೆ.

ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ. ಮುಸ್ಲಿಮರೊಂದಿಗೆ ಬದುಕು. ಹೊರಗೆ ಮಾತ್ರ ಮುಸ್ಲಿಮರ ಮೇಲೆ ದ್ವೇಷ ಭಾಷಣ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ! ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ ಎಂದು ತಾಕೀತು ಮಾಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ