ನಿಗಮ-ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ: ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ.
ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗಲಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದರು. ಇದೇ 21 ರಂದು ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಇಲ್ಲೂ ಇದೆ, ನಾಗ್ಪುರದಲ್ಲೂ ಇದೆ" ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.