ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ 
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಇದಕ್ಕು ಮುನ್ನ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮತ್ತು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ವಿಜೇಯಂದ್ರ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿ ಭೇಟಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿರುವ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು ಎಂದು ಬರೆದುಕೊಂಡಿದ್ದಾರೆ.

2024 ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ಇಂದು ತುಂಬಾ 'ಪ್ರಬಲ ದಾಳಿ': ಟ್ರಂಪ್ ವಾರ್ನಿಂಗ್; ಹಿಜ್ಬುಲ್ಲಾನ ನಿಶ್ಯಸ್ತ್ರಗೊಳಿಸಿ, ಲೆಬನಾನ್‌ಗೆ ಇಸ್ರೇಲ್ ಎಚ್ಚರಿಕೆ!

"ರಷ್ಯಾ ತೈಲ ಖರೀದಿಗೆ 30 ದಿನಗಳ ಅನುಮತಿ ಕೊಡ್ತೀವಿ"; ಅಮೆರಿಕ ಉದ್ಧಟತನಕ್ಕೆ ಕೆರಳಿದ ಭಾರತ ಹೇಳಿದ್ದೇನು!

'ನನ್ನ ಮೇಲೆ ಏಕೆ ಕೋಪವಿದೆಯೋ ಗೊತ್ತಿಲ್ಲ': ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಗರಂ ಆಗಿದ್ದೇಕೆ?

ಶರಣಾಗತಿಯನ್ನೇ ಕಾರ್ಯತಂತ್ರವೆಂದು ತಪ್ಪಾಗಿ ತಿಳಿದುಕೊಂಡ ಮೋದಿ; ಎಫ್‌ಸ್ಟೀನ್ ಫೈಲ್ಸ್‌ ಭಯ: ಸಿದ್ದರಾಮಯ್ಯ

ಭಾರತದ ಬಗ್ಗೆ ಅಮೆರಿಕ ವಿದೇಶಾಂಗ ಸಚಿವರ ಹಗುರ ಹೇಳಿಕೆ: ಮೋದಿ, ಜೈಶಂಕರ್ ಕಾರಣ ಎಂದ ಪ್ರಿಯಾಂಕ್ ಖರ್ಗೆ!

SCROLL FOR NEXT