ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ; ಲೋಕಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನ ಗೆಲ್ಲುವ ಒತ್ತಡದಲ್ಲಿ ರಾಜ್ಯ ಕಾಂಗ್ರೆಸ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸಬೇಕೆಂಬ ಕೂಗು ಕೇಳಿಬಂದಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕರ್ನಾಟಕ ಕಾಂಗ್ರೆಸ್‌ಗೆ ಒತ್ತಡ ಹೇರುವ ಸಾಧ್ಯತೆಯಿದೆ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸಬೇಕೆಂಬ ಕೂಗು ಕೇಳಿಬಂದಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕರ್ನಾಟಕ ಕಾಂಗ್ರೆಸ್‌ಗೆ ಒತ್ತಡ ಹೇರುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಿದ್ದು, ಹೊಸ ಮುಖಗಳನ್ನು ಕಣಕ್ಕಿಳಿಸದೆ, ಹಳೆಯ ಯುದ್ಧ ಕುದುರೆಗಳನ್ನೇ ಕಣಕ್ಕಿಳಿಸುವ ಸಾಧ್ಯತೆಯೇ ಹೆಚ್ಚಿದೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಲುವಾಗಿ ಸಚಿವರು ಸೇರಿದಂತೆ ಭಾರಿ ಘಟಾನುಘಟಿಗಳನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳುವ ಸಾಧ್ಯತೆಯಿದೆ. ಫಲಿತಾಂಶಗಳು ಇಂಡಿಯಾ ಮೈತ್ರಿಯ ಪರವಾಗಿ ಬಂದರೆ ಖರ್ಗೆ ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಿವೆ. 

ನವದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖರ್ಗೆ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚುನಾವಣಾ ಕಾರ್ಯತಂತ್ರಗಳ ಕುರಿತು ಚರ್ಚಿಸಿದ್ದಾರೆ. ಗುರುವಾರ ರಾಜ್ಯ ಸಂಪುಟ ಸಚಿವರಲ್ಲಿ ಈ ಕುರಿತು ಚರ್ಚೆ ನಡೆದಿದೆ. ಪ್ರತಿ ಕ್ಷೇತ್ರದಿಂದ ಮೂವರು ಸಂಭಾವ್ಯರನ್ನು ಆಯ್ಕೆ ಮಾಡುವ ಉಸ್ತುವಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ. ಪಕ್ಷದ ಹೈಕಮಾಂಡ್ ಮುಂಚಿತವಾಗಿ ಹೆಸರನ್ನು ಅಂತಿಮಗೊಳಿಸಲು ಬಯಸಿರುವುದರಿಂದ ಈ ಪ್ರಕ್ರಿಯೆಯನ್ನು ವೇಗಗೊಳಿಸಲು ತಿಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯದ 28 ಸ್ಥಾನಗಳ ಪೈಕಿ ಕಾಂಗ್ರೆಸ್ ಈಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಕೆ ಸುರೇಶ್ ಅವರನ್ನು ಮಾತ್ರ ಹೊಂದಿದೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಈ ಬಾರಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.

ಸಹಕಾರ ಸಚಿವ ಕೆಎನ್ ರಾಜಣ್ಣ ಸ್ವಯಂ ಪ್ರೇರಿತರಾಗಿ ತುಮಕೂರು ಅಭ್ಯರ್ಥಿಯಾಗಲು ಮುಂದಾಗಿದ್ದಾರೆ. ಬೆಳಗಾವಿಯಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಚಾಮರಾಜನಗರದಿಂದ ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ, ಕೋಲಾರದಿಂದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ, ಬೀದರ್‌ನಿಂದ ಅರಣ್ಯ ಸಚಿವ ಈಶ್ವರ ಖಂಡ್ರೆ, ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದರೆ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಸ್ಪರ್ಧಿಸುವಂತೆ ಕೇಳುವ ಸಾಧ್ಯತೆಯಿದೆ. ಹಾವೇರಿಯಿಂದ ಎಂಎಲ್‌ಸಿ ಸಲೀಂ ಅಹಮದ್ ಮತ್ತು ಮೈಸೂರು-ಕೊಡಗಿನಿಂದ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರನ್ನು ಕಣಕ್ಕಿಳಿಸುವ ಮಾತುಕತೆಗಳು ಪಕ್ಷದೊಳಗೆ ನಡೆಯುತ್ತಿವೆ.

ಮಹದೇವಪ್ಪ ಅವರು ತಮ್ಮ ಪುತ್ರ ಸುನೀಲ್ ಬೋಸ್ ಹೆಸರನ್ನು ಪ್ರಸ್ತಾಪಿಸಿದ್ದು, ಮುನಿಯಪ್ಪ ಅವರು ಚುನಾವಣೆಗೆ ಸ್ಪರ್ಧಿಸಿದರೆ, ತಮ್ಮ ಪುತ್ರಿ ಮತ್ತು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ರದುರ್ಗದಿಂದ ಎಚ್ ಆಂಜನೇಯ, ದಕ್ಷಿಣ ಕನ್ನಡದಿಂದ ರಮಾನಾಥ ರೈ ಮತ್ತು ಉಡುಪಿ-ಚಿಕ್ಕಮಗಳೂರಿನಿಂದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗಡೆ ಅವರನ್ನು ಕಣಕ್ಕಿಳಿಸಲು ಪಕ್ಷ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಅಭ್ಯರ್ಥಿಯನ್ನಾಗಿ ಖರ್ಗೆಯವರ ಹೆಸರನ್ನು ಔಪಚಾರಿಕವಾಗಿ ಪ್ರಸ್ತಾಪಿಸದಿದ್ದರೂ, ಅವರನ್ನು ಪರಿಗಣಿಸಿದರೆ ಅವರು ರಾಜ್ಯದ ಅತ್ಯಂತ ಹಿರಿಯ ಮತ್ತು ಪ್ರಬಲ ನಾಯಕರಾಗಿರುವುದರಿಂದ ಎಲ್ಲಾ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈಗ ರಾಜ್ಯಸಭಾ ಸದಸ್ಯರಾಗಿರುವ ಖರ್ಗೆ ಅವರು ರಾಷ್ಟ್ರಮಟ್ಟದಲ್ಲಿ ಪಕ್ಷದ ಪ್ರಚಾರದಲ್ಲಿ ನಿರತರಾಗಿರುವ ಕಾರಣ 2019ರಲ್ಲಿ ಸೋತ ಕಲಬುರಗಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT