ಬಿ.ವೈ ವಿಜಯೇಂದ್ರ 
ರಾಜಕೀಯ

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. 

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. 

ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ.ರಾಜೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಜೆ.ಪ್ರೀತಮ್ ಗೌಡ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು
ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್.ಸಿ.ಮೋರ್ಚಾ ಅಧ್ಯಕ್ಷರಾಗಿ ಎಸ್.ಮಂಜುನಾಥ್(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ ರೈತ ಮೋರ್ಚಾ ಅಧ್ಯಕ್ಷರಾಗಿ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ್ ಥಾಮಸ್ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?