ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ

Shilpa D

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ–ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಜಾತ್ಯತೀತ ಸ್ವರೂಪವನ್ನು ಪ್ರಶ್ನಿಸುವಂತಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

ವಿಭಜಿಸುವ ಪ್ರಕ್ರಿಯೆಗಳನ್ನು ಮೀರಿ ಶಿಕ್ಷಣಕ್ಕೆ ಆದ್ಯತೆ ನೀಡುವುದು ಮತ್ತು ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ಸೃಜಿಸುವುದು ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

SCROLL FOR NEXT