ಜಿ.ಪರಮೇಶ್ವರ್ 
ರಾಜಕೀಯ

4 ಸಾವಿರ ಕೋಟಿ ರೂ. ಹಗರಣ ಎಂದು ಕೊಂಡಿದ್ದೆವು; ಯತ್ನಾಳ್ ಮಾಹಿತಿಯಿಂದ ನೆರವಾಗಿದೆ: ಜಿ. ಪರಮೇಶ್ವರ

ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.

ಕಲಬುರಗಿ: ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಗೃಹ ಪರಮೇಶ್ವರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.

ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿ ಕಾನೂನು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ. ಯಾರಿಗೆ ನೋಟಿಸ್ ನೀಡಬೇಕು, ಯಾವ ರೀತಿ ವಿಚಾರಣೆ ನಡೆಸಬೇಕೆಂಬುದನ್ನು ಸಮಿತಿ ತೀರ್ಮಾನಿಸುತ್ತದೆ ಎಂದು ಹೇಳಿದರು.

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯಲ್ಲಿ, ಅವ್ಯವಹಾರಗಳನ್ನು ತಡೆಗಟ್ಟಲು ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಮುಂದಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ) ಮತ್ತು ಪಿಎಸ್‌ಐ ನೇಮಕಾತಿ ಪರೀಕ್ಷೆಯು ಕಲಬುರಗಿ ಮತ್ತು ವಿಜಯಪುರ ಸೇರಿದಂತೆ ಇತರ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಪಿಎಸ್‌ಐ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಬಿ ವೀರಪ್ಪ ಆಯೋಗವು ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT