ವಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

ಲೋಕಸಭೆ ಚುನಾವಣೆ ಹಿನ್ನೆಲೆ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಸುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

ಮುಂಬರುವ ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶನಿವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

"ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ... ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು ಮೀನಾ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ 1,000 ಕೋಟಿ ನೀಡಲು ಹೊರಟಿದೆ. ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ?" ಎಂದು ಕೇಳಿದ್ದಾರೆ.

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ