ಬಿ.ವೈ ವಿಜಯೇಂದ್ರ 
ರಾಜಕೀಯ

ಬಿಎಸ್ ವೈ ಕುಟುಂಬಕ್ಕೆ ಯಾರ ಸಹಾನುಭೂತಿಯೂ ಬೇಡ; ಕೋವಿಡ್ ಆರೋಪಕ್ಕೆ ಸರ್ಕಾರ ಯಾವುದೇ ತನಿಖೆ ನಡೆಸಲಿ: ವಿಜಯೇಂದ್ರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಸತ್ಯವನ್ನು ಹೊರತೆಗೆಯಲು ಯಾವುದೇ ತನಿಖೆಗೆ ಆದೇಶಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಯಾವುದೇ ತನಿಖೆಗೆ ಆದೇಶಿಸಲು ಸರ್ಕಾರವು ಸ್ವತಂತ್ರವಾಗಿದೆ. ತನಿಖೆ ನಡೆಸುವಾಗ ಯಡಿಯೂರಪ್ಪ ಅಥವಾ ಅವರ ಕುಟುಂಬಕ್ಕೆ ಸರ್ಕಾರ ಯಾವುದೇ ಸಹಾನುಭೂತಿ ತೋರಿಸುವುದು ನನಗೆ ಇಷ್ಟವಿಲ್ಲ. ನಾನು ಯಾವುದೇ ತನಿಖೆಗೆ ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಸರ್ಕಾರದ ಅಡಿಯಲ್ಲಿ 40,000 ಕೋಟಿ ರೂಪಾಯಿ ದುರ್ಬಳಕೆಯಾಗಿದೆ ಎಂದು ಇತ್ತೀಚೆಗೆ  ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು.

ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಗೆ ಮೊದಲ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ನಾಯಕತ್ವವು ಪರಿಸ್ಥಿತಿಗೆ ಅನುಗುಣವಾಗಿ ಯಾರ ವಿರುದ್ಧವೂ ಕ್ರಮ ಕೈಗೊಳ್ಳಬಹುದು. ಯಾರ ವಿರುದ್ಧವೂ ಕೇಂದ್ರ ನಾಯಕತ್ವಕ್ಕೆ ದೂರು ನೀಡಿಲ್ಲ ಎಂದಿರುವ ಅವರು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿಕೂಟವು ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ನಾನು ಬಯಸುತ್ತೇನೆ, ನನ್ನ ಗುರಿ ಸ್ಪಷ್ಟವಾಗಿದೆ. ನನಗೆ ನಮ್ಮ ಪಕ್ಷದ ನಾಯಕರ ಸಂಪೂರ್ಣ ಬೆಂಬಲ ಸಿಕ್ಕಿದೆ, ಆದರೆ ಕೆಲವರು ಕೆಲವು ಕಾರಣಗಳಿಂದ ಅಸಮಾಧಾನಗೊಂಡಿರಬಹುದು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಲಾಗುವುದು. ಹಳೇಯದನ್ನಲ್ಲ ಬಿಟ್ಟು ಪೂರ್ಣ ಉತ್ಸಾಹದಿಂದ ಮುನ್ನಡೆಯಲು ನಾನು ಬಯಸುತ್ತೇನೆ ಎಂದಿದ್ದಾರೆ.

ಬರದಿಂದ ಕಂಗೆಟ್ಟಿರುವ ರೈತರ ಹಿತಕಾಯುವ ಬದಲು ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಂಗ್ರೆಸ್ ಸರಕಾರ ನಿರತವಾಗಿದೆ ಎಂದು ಆರೋಪಿಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರೈತರನ್ನು ಕಡೆಗಣಿಸುತ್ತಿರುವ ಸರಕಾರ ಅಲ್ಪಸಂಖ್ಯಾತರಿಗೆ ಮನೆ ನಿರ್ಮಿಸಲು 1,000 ಕೋಟಿ ಅನುದಾನ ನೀಡುವ ಮೂಲಕ ಅವರನ್ನು ಓಲೈಸುವ ಕಾರ್ಯದಲ್ಲಿ ನಿರತವಾಗಿದೆ. ಅಲ್ಪಸಂಖ್ಯಾತರಿಗೆ ಹಣ ನೀಡುವುದನ್ನು ಬಿಜೆಪಿ ವಿರೋಧಿಸುವುದಿಲ್ಲ, ಆದರೆ ರೈತರಿಗೆ ಸಹಾಯ ಮಾಡಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT